Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೋವಿಂದ ಕಾರಜೋಳರವರು ಪರಿಶಿಷ್ಟ ಜಾತಿಯವರೆಂದು ಕೀಳಾಗಿ ಕಾಣಬಾರದು. ಈ ಬಾರಿಯ ಚುನಾವಣೆಯಲ್ಲಿ ಮತದಾರರೆ ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಲಿದ್ದಾರೆ : ಕೆ.ಎಸ್. ನವೀನ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06  : ದೇಶದ ಪ್ರಧಾನಿ ನರೇಂದ್ರಮೋದಿ ಕಳೆದ ಹತ್ತು ವರ್ಷಗಳಲ್ಲಿ ನೂರಾರು ಯೋಜನೆಗಳನ್ನು ಜನತೆಗೆ ನೀಡಿರುವುದನ್ನು ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಮತದಾರರ ಬಳಿ ಹೋಗುತ್ತೇವೆಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಮೋದಿರವರು ಯಾರು ಹಸಿವಿನಿಂದ ನರಳಬಾರದೆಂದು ಜಿಲ್ಲೆಯಲ್ಲಿ ಹದಿನಾರು ಲಕ್ಷದ 37685 ಜನರಿಗೆ ಪಡಿತರ ಧಾನ್ಯ ನೀಡಿದ್ದಾರೆ. ಆರು ಲಕ್ಷದ ಐವತ್ತು ಸಾವಿರದ 257 ಜನರಿಗೆ ಐದು ಲಕ್ಷದವರೆಗೆ ಅತಿ ದೊಡ್ಡ ವಿಮೆ ಯೋಜನೆ ಸಿಕ್ಕಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಒಂದು ಲಕ್ಷ ತೊಂಬತ್ತು ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 9 ಸಾವಿರದ 908 ನೂತನ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಮೂರು ಲಕ್ಷದ 24 ಸಾವಿರದ ಐದು ನೂರು ಜನರು ಈ ಶ್ರಮ್ ಕಾರ್ಡ್ ಪಡೆದುಕೊಂಡಿದ್ದಾರೆ. ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 27 ಲಕ್ಷದ ಐದು ಸಾವಿರದ 945 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದಿಂದ ಆರು ಸಾವಿರ ರೂ. ಹಾಗೂ ರಾಜ್ಯದಿಂದ ನಾಲ್ಕು ಸಾವಿರ ರೂ. 3 ಲಕ್ಷ 37 ಸಾವಿರದ 527 ರೈತರ ಖಾತೆಗಳಿಗೆ ಹಣ ಜಮಾ ಆಗುತ್ತಿದೆ. ಹದಿನೆಂಟು ಸಾವಿರದ 120 ರೈತರ ಹೊಲಗಳಿಗೆ ಸಾಯಿ ಹೆಲ್ತ್ ಕಾರ್ಡ್ ಸಿಕ್ಕಿದೆ. ಜನ್‍ಧನ್ ಯೋಜನೆ ಶೇ. ನೂರರಷ್ಟು ಅನುಷ್ಠಾನಗೊಂಡಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 2014 ರಿಂದ ಇಲ್ಲಿಯವರೆಗೆ ಒಂದು ಸಾವಿರದ 81 ಕಿ.ಮಿ. ರಸ್ತೆಯಾಗಿದೆ. ವೃದ್ದಾಪ್ಯ ವೇತನ ಯೋಜನೆಯಡಿ ಮೂರು ಲಕ್ಷ ಎಂಟು ಸಾವಿರದ 338 ಜನರಿಗೆ ಪಿಂಚಣಿ ಸಿಕ್ಕಿದೆ. ಕೌಶಲ್ಯಾಭಿವೃದ್ದಿ ಯೋಜನೆಯಡಿ 31477 ಯುವಕರಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ.

ಜಿಲ್ಲೆಯಲ್ಲಿ 20 ಜನೌಷಧಿ ಕೇಂದ್ರಗಳು ಆರಂಭಗೊಂಡಿವೆ. 16722 ಮಹಿಳೆಯರಿಗೆ ವಿಶೇಷ ತರಬೇತಿ ನೀಡಲಾಗಿದೆ. ಸ್ವನಿಧಿ ಯೋಜನೆಯಡಿ 6777 ಬೀದಿ ಬದಿ ವ್ಯಾಪಾರಿಗಳಿಗೆ ತಲಾ ಹತ್ತು ಸಾವಿರ ರೂ.ಗಳನ್ನು ನೀಡಲಾಗಿದೆ. ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆಯಡಿ 4 ಲಕ್ಷ 36 ಸಾವಿರದ 949 ಫಲಾನುಭವಿಗಳಿಗೆ ಎಲ್.ಇ.ಡಿ. ಬಲ್ಬ್‍ಗಳನ್ನು ವಿತರಿಸಲಾಗಿದೆ. ಉಜ್ವಲ ಯೋಜನೆಯಡಿ 2 ಲಕ್ಷ ಐದು ಸಾವಿರದ 331 ಮನೆಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಶ್ರಮಯೋಗಿ ಮಾನಧನ್ ಅಡಿ 7238 ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆಂದು ತಿಳಿಸಿದರು.

ಮುದ್ರಾಂಕ ಯೋಜನೆಯಡಿ ಎರಡು ಲಕ್ಷಕ್ಕೂ ಹೆಚ್ಚು ಮಂದಿಗೆ ಸಾಲ ಸೌಲಭ್ಯಗಳನ್ನು ನೀಡಲಾಗಿದೆ. ಲಕ್ಷಾಂತರ ರೈತರ ಖಾತೆಗಳಿಗೆ ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿ ಹಣ ವರ್ಗಾವಣೆಯಾಗಿದೆ. ಹೈವೆ ನಿರ್ಮಾಣಕ್ಕೆ ಆರು ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಕೇಂದ್ರ ಸರ್ಕಾರದ ಇಷ್ಟೆಲ್ಲಾ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಗೋವಿಂದ ಕಾರಂಜೋಳರನ್ನು ಗೆಲ್ಲಿಸಿಕೊಳ್ಳುವುದಾಗಿ ಕೆ.ಎಸ್.ನವೀನ್ ಹೇಳಿದರು.

ಕೇಂದ್ರ ಸರ್ಕಾರ ದೇಶದ ಜನರ ಹಿತಕಾಯುವ ಕೆಲಸ ಮಾಡುತ್ತಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿನಃ ಕಾರಣ ಕೇಂದ್ರ ಮೇಲೆ ತಪ್ಪು ಹೊರಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ. ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು ಎಂದರು.

ಖಂಡನೆ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಕಳೆದ ನಾಲ್ಕರಂದು ಚಿತ್ರದುರ್ಗಕ್ಕೆ ಆಗಮಿಸಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಗೋಬ್ಯಾಕ್ ಎಂದು ಹೇಳಿ ಜನರನ್ನು ಪ್ರಚೋದಿಸುತ್ತಿರುವುದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆಯಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇದೆ ಸಿದ್ದರಾಮಯ್ಯನವರು ತಮ್ಮ ಸ್ವಂತ ಕ್ಷೇತ್ರ ಬಿಟ್ಟು ಬದಾಮಿಯಲ್ಲಿ ಸ್ಪರ್ಧಿಸಿದ್ದನ್ನು ಮರೆತು ಬಿಟ್ಟಿದ್ದಾರೆ.

ಗೋವಿಂದ ಕಾರಜೋಳರವರು ಪರಿಶಿಷ್ಟ ಜಾತಿಯವರೆಂದು ಕೀಳಾಗಿ ಕಾಣಬಾರದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರೆ ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಲಿದ್ದಾರೆಂದರು.

ಸಿದ್ದರಾಮಯ್ಯನವರು ಒಮ್ಮೆ ಬದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾಗ ಅಲ್ಲಿನ ಮತದಾರರು ಗೋಬ್ಯಾಕ್ ಸಿದ್ದರಾಮಯ್ಯ ಎಂದು ಹೇಳಿದ್ದರೆ ಅವರ ಪರಿಸ್ಥಿತಿ ಏನಾಗಿರುತ್ತಿತ್ತು. ಮತ್ತೊಬ್ಬರ ಬಗ್ಗೆ ಹಗುರವಾಗಿ ಮಾತನಾಡುವ ಬದಲು ಯೋಚಿಸಿದರೆ ಒಳ್ಳೆಯದು ಎಂದು ಕೆ.ಎಸ್.ನವೀನ್ ಕಿಡಿಕಾರಿದರು.

ಬಿಜೆಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ತಿಪ್ಪೇಸ್ವಾಮಿ ಛಲವಾದಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!