ಸುದ್ದಿಒನ್, ಚಿತ್ರದುರ್ಗ, ಜೂನ್. 24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಗೋವಿಂದ ಎಂ. ಕಾರಜೋಳ ಅವರು ಇಂದು (ಸೋಮವಾರ) ನಡೆದ 18ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮೊದಲಿಗೆ ಹಂಗಾಮಿ ಸ್ಪೀಕರ್ ಭರ್ತ್ರಿಹರಿ ಮಹತಾಬ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟದ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ನೂತನವಾಗಿ ಆಯ್ಕೆಯಾದ ಸಂಸದರು ಒಬ್ಬೊಬ್ಬರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯವಾರು ಸಂಸದರು ಇಂಗ್ಲಿಷ್ ವರ್ಣಮಾಲೆಯ ಪ್ರಕಾರ ಪ್ರಮಾಣ ವಚನ ಸ್ವೀಕರಿಸಿದರು.
ಸಂಸತ್ ಅಧಿವೇಶನದ ಮೊದಲ ದಿನವಾದ ಇಂದು 280 ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಎರಡನೇ ದಿನವಾದ ನಾಳೆ ಅಂದರೆ ಜೂನ್ 25 ರಂದು ಇನ್ನುಳಿದ 264 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















