ಬೆಂಗಳೂರು: ಕೊರೊನಾ ಭಯದಿಂದ ಮುಚ್ಚಿದ್ದ ಶಾಲೆಗಳೆಲ್ಲಾ ಹಂತ ಹಂತವಾಗಿ ಆರಂಭವಾಗಿದೆ. ಮಕ್ಕಳು ಖುಷಿಯಿಂದಲೇ ಶಾಲೆಗೆ ಮಕ್ಕಳು ಹೋಗ್ತಿದ್ದಾರೆ. ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬೆನ್ನಲ್ಲೇ ಉಳಿದಿದ್ದ ಎಲ್ ಕೆ ಜಿ, ಯುಕೆಜಿ ಶಾಲೆ ಆರಂಭಕ್ಕೂ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ನವೆಂಬರ್ 8 ರಿಂದ ಎಲ್‍ಕೆಜಿ-ಯುಕೆಜಿ ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಆರಂಭಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು. ಶೇ. 2 ಕ್ಕಿಂತ ಕಡಿಮೆ ಕೊರೊನಾ ಪ್ರಕರಣ ಇರುವ ತಾಲೂಕುಗಳಲ್ಲಿ ಮಾತ್ರ ಅವಕಾಶ. ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು. ನಿತ್ಯ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಎಲ್ಲಾ ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು. ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಸಮಸ್ಯೆ ಇದ್ದರೆ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಅವಕಾಶ ನೀಡಬಾರದು. ಶಾಲಾ ಆವರಣ, ಶಾಲೆಯ ಒಳಗೆ ವಿದ್ಯಾರ್ಥಿಗಳನ್ನು ಕೂರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು. ವಿದ್ಯಾರ್ಥಿಗೆ ಸೋಂಕು ಬಂದ ಕೂಡಲೇ ಶಾಲೆ ಮುಚ್ಚಿಸಿ ಎಲ್ಲಾ ವಿದ್ಯಾರ್ಥಿಗಳಿಗೂ ತಪಾಸಣೆ ನಡೆಸಬೇಕು. ವಿದ್ಯಾರ್ಥಿಯ ಆರೋಗ್ಯದ ಮೇಲೆ ನಿತ್ಯ ಶಾಲೆಯವರು ನಿಗಾ ವಹಿಸಬೇಕು.