ನವದೆಹಲಿ: ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯ ಪರವಾನಗಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಸರ್ಕಾರೇತರ ಸಂಸ್ಥೆಯಾಗಿರುವ ರಾಜೀವ್ ಗಾಂಧಿ ಟ್ರಸ್ಟ್ ವಿದೇಶಿ ಧನ ಸಹಾಯ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದ್ದು, ಕೇಂದ್ರ ಗೃಹ ಸಚಿವಾಲಯ ಲೈಸೆನ್ಸ್ ರದ್ದು ಮಾಡಿದೆ.
ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ಗೆ ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಚಿದಂಬರಂ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸದಸ್ಯರಾಗಿದ್ದಾರೆ. 1991ರಲ್ಲಿ ಸ್ಥಾಪನೆಯಾದ ರಾಜೀವ್ ಗಾಂಧಿ ಟ್ರಸ್ಟ್ 2009 ರ ತನಕ ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ಮಹಿಳೆಯರು ಮತ್ತು ಮಕ್ಕಳ ಕಲ್ಯಾಣದ ನೆರವಿಗೆ ನಿಂತಿತ್ತು. ಬಳಿಕ ಸಂಪೂರ್ಣವಾಗಿ ಶಿಕ್ಷಣದ ಕಡೆಗೆ ಕೇಂದ್ರೀಕರಣವಾಗಿತ್ತು.
2020 ರಲ್ಲಿ ಕೇಂದ್ರ ಗೃಹ ಸಚಿವಾಲಯ ಟ್ರಸ್ಟ್ ಮೇಲೆ ತನಿಖೆ ನಡೆಸಲು ಆದೇಶಿಸಿತ್ತು. ಇಡಿ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡ ನೀಡಿದ ವರದಿಯ ಮೇರೆಗೆ ಲೈಸೆನ್ಸ್ ರದ್ದು ಮಾಡಲಾಗಿದೆ.