ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ

 

ಚಿತ್ರದುರ್ಗ, ಫೆಬ್ರವರಿ.01 : ಪಂಚಗ್ಯಾರಂಟಿ ಯೋಜನೆಗಳನ್ನು ಕೇವಲ ಚುನಾವಣೆ ಪ್ರಚಾರಕ್ಕಾಗಿ ಜಾರಿ ಮಾಡಿಲ್ಲ. ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಠಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ.  ರಾಜ್ಯ ಸರ್ಕಾರ ಜನಪರ ಯೋಜನೆಗಳ ಜಾರಿಗೆ ಸದಾ ಬದ್ದವಾಗಿರುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದರು.

ಶನಿವಾರ ನಗರದ ಜಿ.ಪಂ. ಕಚೇರಿ ಆವರಣದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ನೂತನ ಕಚೇರಿಯನ್ನು ಉದ್ಘಾಟಿಸಿ, ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮ ದೇಶದ ಬಡವರ ಜೀವನದಲ್ಲಿ ಸಾಕಷ್ಟು ಬದಲಾವಣೆ ತಂದಿತು. ಇವರ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸ್ ರಕ್ತಕ್ರಾಂತಿ ಇಲ್ಲದೆಯೇ ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಜಾರಿ ಮಾಡಿ, ಭೂ ರಹಿತರಿಗೆ ಭೂಮಿ ಹಕ್ಕು ದೊರಕಿಸಿಕೊಟ್ಟರು. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು ರಾಜ್ಯದ ಪದವಿಧರರಿಗೆ ಸರ್ಕಾರಿ ನೌಕರಿ ದೊರಯುವಂತೆ ಮಾಡಿದರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರು ಜಾರಿ ಮಾಡಿದ ಸಿಇಟಿ ಪದ್ದತಿ, ಬಡವರ ಮಕ್ಕಳಿಗೆ  ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಲಭಿಸುವಂತೆ ಮಾಡಿತು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ರೈತರ ಜಮೀನಿನಲ್ಲಿರುವ 10 ಹೆಚ್.ಪಿ. ಮೋಟಾರಿನ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಿದರು. ಸಿದ್ಧರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಜಾರಿ ಮಾಡಿದರು. ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ಅವರನ್ನು ಭಾಗ್ಯಗಳ ರಾಜ ಎಂದು ಕರೆಯಲಾಗುತ್ತಿದೆ. ನಮ್ಮ ಪಕ್ಷದ ಸರ್ಕಾರಗಳು ಜನರ ಜೀವನದಲ್ಲಿ ಮಹತ್ವದ ಬದಲಾವಣೆ ತರುವಂತಹ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ಮನೆ ರಹಿತರಿಗೆ ಮನೆ ಸೇರಿದಂತೆ ನೂರಾರು ಯೋಜನೆಗಳನ್ನು ಜಾರಿ ಮಾಡಿವೆ ಎಂದರು.

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರೂ.9,124 ಕೋಟಿ ಖರ್ಚು ಮಾಡಿದೆ.  ಗೃಹಲಕ್ಷ್ಮೀ ಯೋಜನೆಯಡಿ 1.2 ಕೋಟಿ ಮಹಿಳೆಯರು ನೊಂದಣಿಯಾಗಿದ್ದು, ಇವರಿಗೆ ಪ್ರತಿ ಮಾಹೆ ರೂ.2000 ಹಣವನ್ನು ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಇದಕ್ಕಾಗಿ ರೂ.35,608 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ರಾಜ್ಯದ ಎಲ್ಲ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕಾಗಿ ರೂ.11,810 ಕೋಟಿ ವ್ಯಯಿಸಲಾಗಿದೆ. ಯುವನಿಧಿ ಯೋಜನೆಯಡಿ 2.14 ಲಕ್ಷ ಫಲಾನುಭವಿಗಳಿಗೆ ರೂ.222 ಕೋಟಿ ಹಣ ನೀಡಲಾಗಿದೆ ಎಂದು ಹೆಚ್.ಎಂ.ರೇವಣ್ಣ ಮಾಹಿತಿ ನೀಡಿದರು.

suddionenews

Recent Posts

ಕಂದಾಚಾರ, ಮೂಢನಂಬಿಕೆಗಳ ನಿರ್ಮೂಲನೆಗೆ ಶ್ರಮಿಸಿದವರು ಮಡಿವಾಳ ಮಾಚಿದೇವ : ಎಡಿಸಿ ಬಿ.ಟಿ.ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಕರ್ನಾಟಕ ವಿರೋಧಿ ಬಜೆಟ್ : ಡಾ.ಸಂಜೀವಕುಮಾರ ಪೋತೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಕರ್ನಾಟಕದ ಪಾಲಿಗೆ ಘನಘೋರ ಅನ್ಯಾಯ, ಇದೊಂದು ಋಣ ತೀರಿಸುವ ಬಜೆಟ್ : ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ಬಿ.ಆರ್.ಪಾಟೀಲ್ ರಾಜೀನಾಮೆ..!

    ಬೆಂಗಳೂರು: ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಶಾಸಕ ಬಿ.ಆರ್. ಪಾಟೀಲ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಲಬುರಗಿ…

2 hours ago

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ಸತತವಾಗಿ 5 ನೇ ಬಾರಿಗೆ ನಿರ್ದೇಶಕರಾಗಿ ನಿಶಾನಿ ಜಯಣ್ಣ ಆಯ್ಕೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 01: ಚಿತ್ರದುರ್ಗ…

2 hours ago

ಸಬ್ಕಾ ವಿಕಾಸ್ ಅನ್ನು ಸಾಕಾರಗೊಳಿಸುವ ದೂರದೃಷ್ಟಿ ಬಜೆಟ್ : ಸಂಸದ ಗೋವಿಂದ ಎಂ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 01 : ಇಂದು…

2 hours ago