ಬೆಂಗಳೂರು: ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಪಿಟಿಸಿಎಲ್ ಕಾಯ್ದೆಗಳ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಇನ್ನು ಮಾಹಿತಿಗಳ ಪ್ರಕಾರ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮಂಜುರಾದ ಭೂಮಿಯನ್ನು ಮರುಸ್ಥಾಪಿಸಲು ಕೋರಿ ಅರ್ಜಿ ಹಾಕಲು ಯಾವುದೇ ಸಮಯದ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ಈ ಸಂಬಂಧ ಸಿದ್ದರಾಮಯ್ಯ ಅವರು ಟ್ವೀಟ್ ಕೂಡ ಮಾಡಿದ್ದರು. ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ ಎಂದಿದ್ದರು. ಇದೀಗ 1978 ರ ಕಾಯಿದೆಯು ಸಮಯದ ಮಿತಿಯ ಬಗ್ಗೆ ಹೇಳಿಲ್ಲ ಮತ್ತು ಕಾನೂನಿನ ಬಲವನ್ನು ದುರ್ಬಲಗೊಳಿಸದಂತೆ ನೋಡಿಕೊಳ್ಳಲು ಸಂಘಟನೆಗಳು ಬೇಡಿಕೆ ಇಟ್ಟಿವೆ. ಹಾಗಾಗಿ ಎಸ್‌ಸಿ/ಎಸ್‌ಟಿ ಸಮುದಾಯದ ಭೂಮಿಯ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದ್ದಾರೆ.
ಇನ್ನು ಕೆಲವು ಪ್ರಕರಣಗಳಲ್ಲಿ 25-30 ವರ್ಷಗಳ ಹಿಂದೆ ಭೂಮಿ ಮಾರಾಟ ಅಥವಾ ವರ್ಗಾವಣೆ ನಡೆದ ಅರ್ಜಿದಾರ್ ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿವೆ. ಆದರೆ 2-3 ದಶಕಗಳ ಹಿಂದೆಯೇ ಇಂತಹ ಹಲವಾರು ವರ್ಗಾವಣೆಗಳು ನಡೆದಿದ್ದು, ಭೂ ಮಂಜೂರಾತಿದಾರರ ಕಾನೂನು ಬದ್ಧ ವಾರಸುದಾರರಿಗೆ ನ್ಯಾಯ ಸಿಗಬೇಕು ಎಂದು ದಲಿತ ಹೋರಾಟಗಾರರು ಇದನ್ನು ವಿರೋಧಿಸಿದ್ದಾರೆ.