Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ : ಸಚಿವ ಪರಮೇಶ್ವರ್ ಹೇಳಿದ್ದೇನು ?

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ಮೂಡಾ ಹಗರಣ ವಿರೋಧಿಸಿ‌ ಬಿಜೆಪಿ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ ಆರಂಭದಲ್ಲಿ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ನೀಡಲ್ಲ ಎಂದು ಹೇಳಿದ್ದರು. ಇದೀಗ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಬಗ್ಗೆ‌ಮಾತನಾಡಿರುವ ಜಿ.ಪರಮೇಶ್ಚರ್,ಬಿಜೆಪಿ ನಾಯಕರು ಶಾಂತಿಯುತವಾಗಿ ಪಾದಯಾತ್ರೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಲಾಗುತ್ತಿದೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ನಾಯಕರು ನಡೆಸುತ್ತಿರುವ ಪಾದಯಾತ್ರೆಗೆ ಯಾವುದೇ ತಕರಾರಿಲ್ಲ ಎಂದಿದ್ದಾರೆ.

ಇನ್ನು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟೀಸ್ ಕೊಟ್ಟಿರುವುದರ ಬಗ್ಗೆ ಮಾತನಾಡಿ, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಆತುರಾತುರವಾಗಿ ನೋಟೀಸ್ ಕೊಟ್ಟಿದ್ದಾರೆ. ಗುರುವಾರ ರಾತ್ರಿಯೇ ಸಂಪುಟ ನಿರ್ಣಯ ಕಳಿಸಲು ನಿರ್ಧರಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ. ಕಚೇರಿಗೆ ತಲುಪಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಎನ್ನುವ ಅನುಮಾನ ಇದೆ‌. ದೂರು ಪಡೆದ ದಿನವೇ ರಾಜ್ಯಪಾಲರು ನೋಟೀಸ್ ಕೊಟ್ಟಿದ್ದಾರೆ. ಜುಲೈ 26ರಂದೇ ಟಿಜೆ ಅಬ್ರಾಹಂ ಅವರು ದೂರು ನೀಡಿದ್ದರು.

ರಾಜ್ಯಪಾಲರಿಗೆ ನೀಡಿರುವ ನೋಟೀಸ್ ಗೆ ಈಗಾಗಲೇ ಸಿಎಸ್ ಉತ್ತರ ನೀಡಿದ್ದಾರೆ. ಇದಾದ ಮೇಲೆ ರಾಜ್ಯಪಾಲರಿಂದ ಶೋಕಾಸ್ ನೋಟೋಸ್ ಬಂದಿದೆ. ಪ್ರಾಸಿಕ್ಯೂಷನ್ ಗೆ ಕೊಡಲ್ಲ ಎಂಬ ವಿಶ್ವಾಸ ಇದೆ. ಒಂದು ವೇಳೆ ಕೊಟ್ಟರು ಅದನ್ನು ಕಾನೂನು ಮೂಲಕವೇ ಎದುರಿಸುತ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ತೆಗೆದುಕೊಂಡರು, ಅದನ್ನು ಕಾನೂನು ಮೂಲಕವೇ ನಾವೂ ಎದುರಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment