Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಊಟದ ಜೊತೆಗೆ ಚಿಕ್ಕಿ ಇಲ್ಲ..!

---Advertisement---

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ಶಾಲಾ ಮಕ್ಕಳಿಗೆ ಚಿಕ್ಕಿಯನ್ನು ನೀಡಲಾಗುತ್ತಿತ್ತು. ಪೌಷ್ಟಿಕಾಂಶಕ್ಕಾಗಿ ಪ್ರತಿದಿನ ಒಂದು ಮೊಟ್ಟೆ, ಒಂದು ಬಾಳೆ ಹಣ್ಣು ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿತ್ತು. ಇದೀಗ ಈ ಯೋಜನೆಯಡಿ ಚಿಕ್ಕಿಯನ್ನು ಕೈಬಿಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲು ಮೊಟ್ಟೆ ಅಥವಾ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ. ಅಜೀಂ ಪ್ರೇಮ್ ಜೀ ಫೌಂಡೇಷನ್ ಸಹಭಾಗಿತ್ವದಲ್ಲು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದಲ್ಲಿ ನಾಲ್ಕು ದಿನ ಪೌಷ್ಟಿಕ ಆಹಾರವನ್ನು ಉಚಿತವಾಗಿ ನೀಡುವ ಕಾರ್ಯಕ್ರಮವನ್ನಯ ಅನುಷ್ಠಾನ ಮಾಡಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.

ಇನ್ನು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಪತ್ರದಲ್ಲಿ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ಕೊಡುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತ ಅಪರ್ಯಾಪ್ತ ಕೊಬ್ಬಿನಾಂಶ ಹೆಚ್ಚಿಗೆ ಇದ್ದು, ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೆ ಇದ್ದಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment