Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮ ಪಂಚಾಯಿತಿ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

---Advertisement---

 

ಚಿತ್ರದುರ್ಗ. ಮೇ.08: ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಮೇ 08 ರಿಂದ 28 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೇ.08ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಮೇ.14 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಮೇ.15ರಂದು ನಾಮಪತ್ರಗಳ ಪರಿಶೀಲನೆ, ಮೇ.17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ.25ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನದ ಅವಶ್ಯಕತೆ ಇದ್ದರೆ ಮೇ.27ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮೇ.28ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುವುದು. ಮೇ.28ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment