Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಇಂದು ವಿಜೃಂಭಣೆಯ ಕರ್ನಾಟಕ ರಾಜ್ಯೋತ್ಸವ ಆಚರಣೆ

---Advertisement---

ದಾವಣಗೆರೆ :  ದಾವಣಗೆರೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 1 ರಂದು ಬೆಳಿಗ್ಗೆ 8.30 ಕ್ಕೆ  ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಧ್ವಜಾರೋಹಣ ಹಾಗೂ ರಾಜ್ಯೋತ್ಸವ ಸಂದೇಶವನ್ನು ಮಾನ್ಯ ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮುಜುರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಕೆ.ಎಸ್. ಬಸವಂತಪ್ಪ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜು ವಿ. ಶಿವಗಂಗಾ, ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಪಿ. ಹರೀಶ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮರ್ಥ ಶಾಮನೂರು ಮಲ್ಲಿಕಾರ್ಜುನ್, ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ದೇವೇಂದ್ರಪ್ಪ, ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾಂತನಗೌಡ ಡಿ.ಜಿ.,  ವಿಧಾನ ಪರಿಷತ್ ಶಾಸಕರುಗಳಾದ  ಎಸ್.ಎಲ್. ಭೋಜೇಗೌಡ, ಶ್ರೀ ಚಿದಾನಂದ  ಎಂ. ಗೌಡ, ಕೆ.ಎಸ್. ನವೀನ್, ಡಾ|| ಧನಂಜಯ್ ಸರ್ಜಿ.  ಡಿ.ಎಸ್. ಅರುಣ್, ಕೆ. ಅಬ್ದುಲ್ ಜಬ್ಬಾರ್, ಡಿ.ಟಿ. ಶ್ರೀನಿವಾಸ್.

ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹೆಚ್.ಬಿ. ಮಂಜಪ್ಪ,ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ  ನಿಯಮಿತ ಅಧ್ಯಕ್ಷರಾದ  ಎನ್. ಜಯದೇವನಾಯ್ಕ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷರಾದ  ಜಿ.ಹೆಚ್. ಮರಿಯೋಜಿರಾವ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಸಗೋಡು ಜಯಸಿಂಹ ,  ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ದಿನೇಶ್. ಕೆ ಶೆಟ್ಟಿಹಾಗೂ  ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ  ಶಾಮನೂರು ಟಿ. ಬಸವರಾಜ್

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ., ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಾಹಿತ್ಯ ಎಂ ಅಲದಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶೇಖರ್ ಹೆಚ್.ಟಿ. ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಡಾ|| ಎನ್. ಮಹಾಂತೇಶ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4.30 ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸರ್ವರೂ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಕೋರಿದೆ.

Join WhatsApp

Join Now

Join Telegram

Join Now