ವಿಜೃಂಭಣೆಯಿಂದ ನಡೆದ ಶ್ರೀ ಚನ್ನಕೇಶವಸ್ವಾಮಿಯ ರಥೋತ್ಸವ

1 Min Read

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಫೆ.05): ಇಲ್ಲಿನ ಕೆಳಗೋಟೆ ಸಿ.ಕೆ.ಪುರದಲ್ಲಿರುವ ಚನ್ನಕೇಶವಸ್ವಾಮಿಯ ರಥೋತ್ಸವ ಭಾನುವಾರ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಶ್ರೀದೇವಿ, ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ರಥೋತ್ಸವವನ್ನು ಬೃಹಧಾಕಾರವಾದ ಹೂವಿನ ಹಾರಗಳಿಂದ ಅಲಂಕರಿಸಲಾಗಿತ್ತು.

ಸಕಲ ವಾದ್ಯವೃಂದಗಳೊಂದಿಗೆ ಮಧ್ಯಾಹ್ನ 1-15 ಕ್ಕೆ ರಥೋತ್ಸವ ನೆರವೇರಿತು. ಭಕ್ತರು ಮಂಡಕ್ಕಿ ಹಾಗೂ ಹೂವುಗಳನ್ನು ರಥಕ್ಕೆ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಚನ್ನಕೇಶವಸ್ವಾಮಿ ದೇವಸ್ಥಾನದಿಂದ ಕೆಳಗೋಟೆ ಅಡ್ಡರಸ್ತೆಯವರೆಗೆ ರಥವನ್ನು ಭಕ್ತರು ಎಳೆದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ನಗರಸಭೆ ಸದಸ್ಯ ಅಂಗಡಿ ಮಂಜಣ್ಣ, ಮಾಜಿ ಸದಸ್ಯ ಡಿ.ಪ್ರಕಾಶ್, ನ್ಯಾಯವಾದಿ ಫಾತ್ಯರಾಜನ್, ಮಾರುತೇಶ್‍ರೆಡ್ಡಿ ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ರಥೋತ್ಸವದ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *