Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆ. 27 ರಂದು ಹಿರಿಯೂರಿನಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 26 : ನಾಳೆ(ಸೆ. 27) ನಗರದಲ್ಲಿ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಡಿ. ನಾರಾಯಣ ರೆಡ್ಡಿ ತಿಳಿಸಿದರು.

ನಗರದ ಹುಳಿಯಾರು ರಸ್ತೆಯಲ್ಲಿರುವ ತುಳಸಿ ಕಲ್ಯಾಣ ಮಂಟಪ ಪಕ್ಕದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ವೇದಿಕೆ ಮುಂಭಾಗದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಳಿಗ್ಗೆ 9 ಗಂಟೆಗೆ ವಿನಾಯಕನಿಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೆರಿಸಲಾಗುವುದು. ನಂತರ ಅಲಂಕರಿಸಿದ ಟ್ರಾಕ್ಟರ್ ನಲ್ಲಿ ಗಣೇಶನನ್ನು ಕೂರಿಸಿ ವೇದಿಕೆ ಬಳಿ ಕರೆತರಲಾಗುವುದು. ಇದಾದ ನಂತರ ಬೆಳಿಗ್ಗೆ 11.30ಕ್ಕೆ ನಗರದ ಹುಳಿಯಾರು ರಸ್ತೆಯ ಮೋರ್ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಭಜರಂಗದಳದ ದಕ್ಷಿಣ ಪ್ರಾಂತದ ನರೇಶ್ ರೆಡ್ಡಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಳಿಕ ಮೆರವಣಿಗೆ ಆರಂಭಗೊಂಡು ಹುಳಿಯಾರು ರಸ್ತೆ, ಚರ್ಚ್ ರೋಡ್, ಆಸ್ಪತ್ರೆ ಸರ್ಕಲ್ ನಿಂದ ರಂಜಿತ್ ಹೋಟೆಲ್ ತಲುಪಿ ಅಲ್ಲಿಂದ ಪುನಃ ಗಾಂಧಿ ಸರ್ಕಲ್ ವರೆಗೂ ಬೃಹತ್ ಮೆರವಣಿಗೆ ನಡೆಯಲಿದ್ದು, ರಾತ್ರಿ 8 ಗಂಟೆಗೆ ಗಾಂಧಿ ವೃತ್ತದಲ್ಲಿ ಗಣೇಶನಿಗೆ ಆರತಿ ಕಾರ್ಯಕ್ರಮ ನಡೆಯಲಿದ್ದು, ಇದಾದ ನಂತರ ರಾತ್ರಿ ಸುಮಾರು 9 ಗಂಟೆಗೆ ಬಬ್ಬೂರು ಫಾರಂ ಸಮೀಪದ ತೋಟಗಾರಿಕೆ ಕಾಲೇಜು ಹಿಂಭಾಗದ ಬಾವಿಯಲ್ಲಿ ಗಣೇಶನ ವಿಸರ್ಜನೆ ನಡೆಯಲಿದೆ.ಈ ಶೋಭಾಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ತಾಲ್ಲೂಕಿನ ಸಮಸ್ತ ಹಿಂದೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಶೋಭಾಯಾತ್ರೆ ಯಶಸ್ವಿಯಾಗಿ ನಡೆಯಲು ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆ ಸಹಕರಿಸಬೇಕು ಎಂದ ಸಮಿತಿ ಅಧ್ಯಕ್ಷ ಡಿ. ನಾರಾಯಣ ರೆಡ್ಡಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಎಚ್ ಪಿ ಅಧ್ಯಕ್ಷ ಪ್ರಶಾಂತ್, ವಿ ಎಚ್ ಪಿ ಸಹಕಾರ್ಯದರ್ಶಿ ವೆಂಕಟೇಶ್ ಜಿ, ಜಿಲ್ಲಾ ಸುರಕ್ಷಾ ಪ್ರಮುಖ ಚೇತನ್, ಆಲೂರು ದೇಸಾಯಿ, ತಾಲ್ಲೂಕು ಸಂಯೋಜಕ್ ಧನುಷ್ ಎಸ್, ಸಹ ಸಂಯೋಜಕ ವಾಸು ಗೋವಿಂದಾಚಾರ್, ಕಾರ್ಯದರ್ಶಿ ರಾಘವೇಂದ್ರ, ಸಮಿತಿಯ ಕಾರ್ಯದರ್ಶಿ ಪ್ರಭಾಕರ್, ಸಹಕಾರ್ಯದರ್ಶಿ ಮಂಜುನಾಥೇಶ್ವರ, ಖಜಾಂಚಿ ಭೋಜರಾಜ್ , ಸೇವಾ ಪ್ರಮುಖ ನವೀನ್ ಜಗದೀಶ್ ಯಾದವ್ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now