Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಟೆನಾಡಿನಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ : ನೇರಪ್ರಸಾರ ವೀಕ್ಷಿಸಿ!

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಭಕ್ತಿ-ಭಾವದ ಕಳೆಗಟ್ಟಿದ್ದು, ಈಗಾಗಲೇ ಹಿಂದೂ ಮಹಾಗಣಪತಿಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಆರಂಭವಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಲಾಗಿರುವ ಈ ಶೋಭಾಯಾತ್ರೆಯು ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಮೆರವಣಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಹೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರವೇ ಕೇಸರಿ ಧ್ವಜ, ಬಂಟಿಂಗ್ಸ್ಗಳಿಂದ ಕಂಗೊಳಿಸುತ್ತಿದ್ದು, ಸಂಪೂರ್ಣವಾಗಿ ಕೇಸರಿಮಯವಾಗಿದೆ. ನಗರದ ಪ್ರಮುಖ ರಸ್ತೆ, ವೃತ್ತಗಳು ಸಂಪೂರ್ಣ ವಿದ್ಯುತ್ ದೀಪಾಲಂಕಾರದಿಂದ ಕೂಡಿದ್ದು ಹಬ್ಬದ ವಾತಾವರಣ ಕಳೆಗಟ್ಟಿದ್ದು, ಭಕ್ತಸಾಗರವೇ ಹರಿದುಬರುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಈ ಐತಿಹಾಸಿಕ ಹಾಗೂ ವೈಭವೋಪೇತ ಶೋಭಾಯಾತ್ರೆಯ ಪ್ರತಿ ಕ್ಷಣದ ದೃಶ್ಯಾವಳಿಗಳನ್ನು ಸಾರ್ವಜನಿಕರು ಹಾಗೂ ಭಕ್ತಾದಿಗಳು ಮನೆಯಲ್ಲೇ ಕುಳಿತು ಕಣ್ತುಂಬಿಕೊಳ್ಳಲು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಈ ಅವಕಾಶ ಕಲ್ಪಿಸಿದೆ. ಮಹಾಗಣಪತಿಯ ಈ ಭವ್ಯ ಮೆರವಣಿಗೆಯ ಸಂಪೂರ್ಣ ನೇರಪ್ರಸಾರವನ್ನು ಈ ಮೂಲಕ ಲೈವ್ ವೀಕ್ಷಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now