Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಭವನಕ್ಕೆ‌ ಅನುದಾನ : ಕೆಸಿ ವೀರೇಂದ್ರ ಪಪ್ಪಿ ಭರವಸೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜನವರಿ. 24 : ಹಿರೇಗುಂಟನೂರು ಗ್ರಾಮಕ್ಕೆ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಕಾಮಗಾರಿ ಜಾಲ್ತಿಯಲ್ಲಿದ್ದು ಈ ಗ್ರಾಮಕ್ಕೆ ವಾಲ್ಮೀಕಿ ಅವಶ್ಯಕತೆ ಇದ್ದು ಮುಂದಿನ ದಿನಗಳಲ್ಲಿ ವಾಲ್ಮೀಕಿ ಭವನಕ್ಕೆ ಒಂದು ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಶಾಸಕ ಕೆ.ಸಿ. ವೀರೇಂದ್ರ ತಿಳಿಸಿದರು.

ಅವರು ತಾಲ್ಲೂಕಿನ ಭೀಮಸಮುದ್ರ ಸಮೀಪದ ಹಿರೇಗುಂಟನೂರು ಗ್ರಾಮದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ಶ್ರೀ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಮುಖಂಡ ಜಿ.ಎಸ್. ಅನಿತ್ ಕುಮಾರ್ ಮಾತನಾಡಿ, ಐದು ವರ್ಷಕ್ಕೊಮ್ಮೆ ನಡೆಯುವ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಗ್ರಾಮಸ್ಥರು ಏರ್ಪಡಿಸಿದ್ದು ಗ್ರಾಮಸ್ಥರಿಗೆ ಹಾಗೂ ಬಂದಂತ ಎಲ್ಲಾ ಭಕ್ತಾದಿಗಳಿಗೆ ದೇವಿ ಒಳ್ಳೆಯದನ್ನು ಮಾಡಲಿ ಎಂದು ಹೇಳಿದರು.

ಗ್ರಾಮ ಪಂಚಾಯತಿ ಸದಸ್ಯ ಎಸ್. ಮಂಜುನಾಥ್ ಮಾತನಾಡಿ ಶಾಸಕರು ಗ್ರಾಮಕ್ಕೆ ಅನುದಾನವನ್ನು ನೀಡಿದ್ದಾರೆ. ಯಾವ ಶಾಸಕರು ಮಾಡದ ಕೆಲಸವನ್ನು ವೀರೇಂದ್ರ ಪಪ್ಪಿ ಅವರು ಮಾಡುತ್ತಿದ್ದಾರೆ. ಅವರಿಗೆ ಗ್ರಾಮಸ್ಥರು ಪರವಾಗಿ ಧನ್ಯವಾದ ತಿಳಿಸಿದರು.

ಜೀಟಿವಿ ನಟ ಗಿಲ್ಲಿ ಮಾತನಾಡಿ ಹಿರೇಗುಂಟನೂರು ಗ್ರಾಮಕ್ಕೆ ಬಂದಿರುವುದು ಸಂತೋಷವಾಗಿದೆ. ಗ್ರಾಮ ಪಂಚಾಯತಿ ಸದಸ್ಯರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಹೇಳಿದ್ದರು.
ಕರ್ನಾಟಕದ ಜನತೆ ನನಗೆ ಹಳ್ಳಿ ಹಳ್ಳಿಯಲ್ಲೂ ನನ್ನನ್ನು ಕರೆಸಿ ಅಭಿಮಾನ ತೋರಿಸುತ್ತಿರುವುದು ಸಂತೋಷವಾಗಿದೆ. ನಾನು ಹಳ್ಳಿಯ ಯಾವುದೋ ಒಂದು ಮೂಲೆಯಲ್ಲಿದ್ದ ಪ್ರತಿಭೆ ಇಂತಹ ಕಾರ್ಯಕ್ರಮಕ್ಕೆ ಕರೆಸಿ ನನ್ನನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಶಾಸಕರಾದ ಕೆಸಿ ವೀರೇಂದ್ರ ಪಪ್ಪಿ ರವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿ ಟಿವಿಯ ಗಗನ ನಗೆ ಚಟಾಕಿ ಹಾರಿಸಿದರು. ವೇದಿಕೆ ಮೇಲೆ ದ್ಯಾಮಲಂಬ ದೇವಸ್ಥಾನದ ಅಧ್ಯಕ್ಷರಾದ ಚಂದ್ರಣ್ಣ, ವಸಂತ್ ಹೋಟೆಲ್ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿಯಾದ ಜೆ ವಿ ಸಿದ್ದೇಶ್, ಎನ್ ರಮೇಶ್, ಕೆಡಿಪಿ ಸದಸ್ಯರಾದ ನಾಗರಾಜ್, ರಾಜಕುಮಾರ್, ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವದ ಸದಸ್ಯರುಗಳು ಗ್ರಾಮ ಪಂಚಾಯಿತಿಯ ಸದಸ್ಯರುಗಳು ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...