ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನಲ್ಲಿ ಜಾರಿಗೊಳಿಸಲಾಗಿರುವ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 3, 2026ರಿಂದ ಆರಂಭವಾಗಿದ್ದು, ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ.
ಯಾವೆಲ್ಲ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದು?
ಅಭ್ಯರ್ಥಿಗಳು ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಹೊಲಿಗೆ ಯಂತ್ರ ವಿತರಣೆ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಆಹ್ವಾನಿಸಿರುವ ಅಭಿವೃದ್ಧಿ ನಿಗಮಗಳು
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ
ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ
ಅರ್ಹ ಸಾರ್ವಜನಿಕರು ಹಾಗೂ ವಿವಿಧ ಸಮುದಾಯಗಳ ಫಲಾನುಭವಿಗಳು ಸರ್ಕಾರದ ಈ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
ಆಸಕ್ತರು ಸೆಪ್ಟೆಂಬರ್ 30, 2026ರೊಳಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ (https://sevasindhu.karnataka.gov.in) ಅರ್ಜಿ ಸಲ್ಲಿಸಬಹುದು.












