Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಬಲ ಬೆಲೆಯಡಿ ಹೆಸರುಕಾಳು : ಈ ಖರೀದಿ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ..!

---Advertisement---

 

ಚಿತ್ರದುರ್ಗ. ಅ.08 : ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಸಲು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದಿಂದ ರೈತ ಉತ್ಪಾದಕ ಸಹಕಾರಿ ಸಂಘಗಳನ್ನು ಗುರುತಿಸಲಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ ಶ್ರೀರಾಂಪುರ ಪಿ.ಎ.ಸಿ.ಎಸ್ ಹಾಗೂ ಕಂಗುವಳ್ಳಿ ಎಫ್.ಪಿ.ಓ, ಹಿರಿಯೂರು ತಾಲ್ಲೂಕಿನಲ್ಲಿ ಐಮಂಗಲ ಪಿ.ಎ.ಸಿ.ಎಸ್, ಚಿತ್ರದುರ್ಗ ತಾಲ್ಲೂಕಿನಲ್ಲಿ ತುರವನೂರು ಎಫ್.ಪಿ.ಓ, ಮೊಳಕಾಲ್ಮೂರಿನಲ್ಲಿ ಟಿ.ಎ.ಪಿ.ಸಿ.ಎಂ.ಸ್ ರಾಂಪುರ ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ನೊಂದಣಿಗೆ ಅವಕಾಶವಿದೆ.

ಪ್ರತಿ ರೈತರಿಂದ ಎಕರೆಗೆ 3 ಕ್ವಿಂಟಾಲ್‌ಗಳಂತೆ ಗರಿಷ್ಟ 15 ಕ್ವಿಂಟಾಲ್ ಹೆಸರು ಕಾಳು ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಕಾರ್ಯದರ್ಶಿಗಳ ಮೊಬೈಲ್ ಸಂಖ್ಯೆ ಕಂಗುವಳ್ಳಿ 9108134058, ಶ್ರೀರಾಂಪುರ 9844820821, ಐಮಂಗಲ 9986182809, ತುರವನೂರು 9620266826, ರಾಂಪುರ 9886452622 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now