ಬೆಂಗಳೂರು: ಕಳಸಾ ಭಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಚಾಲನೆ ನೀಡಲು ಅಸ್ತು ಎಂದಿದೆ ಎಂದಿದ್ದಾರೆ.
Central water commission has approved much awaited DPR for Kalsa and Bhanduri water project. I sincerely thank PM Shri @narendramodi Ji, Home Minister Shri @AmitShah Ji, and Central Minister of Jal Shakti Shri @gssjodhpur ji. pic.twitter.com/yrPerjRnzJ
— Pralhad Joshi (@JoshiPralhad) December 29, 2022
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿ ಅವರು, ಕರ್ನಾಟಕದ ಕಳಸಾ ಭಂಡೂರಿ ವಿಸ್ತೃತ ವರದಿಗೆ ಕೇಂದ್ರ ಸರ್ಕಾರವೂ ಅನುಮತಿಯನ್ನು ನೀಡಿದೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯವಾಗಿದ್ದ ಈ ಯೋಜನೆಗೆ ಅನುಮತಿ ನಿಡೀದ್ದಕ್ಕಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಜೊತೆಗೆ ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.