Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹ ಜ್ಯೋತಿ ಯೋಜನೆ: ಜಾತಿ ಪ್ರವರ್ಗದ ವಿವರ ಸಲ್ಲಿಕೆ ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟನೆ

---Advertisement---

ಬೆಂಗಳೂರು.ಜುಲೈ.04: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮೂಡಿದ್ದ ಗೊಂದಲಕ್ಕೆ ಬೆಸ್ಕಾಂ ತೆರೆ ಎಳೆದಿದೆ. ಮಾಹಿತಿ ಸಂಗ್ರಹದ ವೇಳೆ ಗ್ರಾಹಕರು ತಮ್ಮ ಜಾತಿ ಅಥವಾ ಪ್ರವರ್ಗದ ವಿವರಗಳನ್ನು ನೀಡುವುದು ಕಡ್ಡಾಯವಲ್ಲ, ಅದು ಕೇವಲ ಐಚ್ಛಿಕ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಜುಲೈ 1 ರಿಂದ ರಾಜ್ಯಾದ್ಯಂತ ಗೃಹ ಜ್ಯೋತಿ ಯೋಜನೆಯಡಿ ಅರ್ಹ ಫಲಾನುಭವಿಗಳ ವಿವರಗಳನ್ನು ಕಲೆಹಾಕುವ ಕಾರ್ಯ ಭರದಿಂದ ಸಾಗಿದೆ. ಬೆಸ್ಕಾಂ ಸಿಬ್ಬಂದಿ ಮತ್ತು ಮೀಟರ್ ರೀಡರ್‌ಗಳು ನೇರವಾಗಿ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ, ‘ಸೇವಾ ಸಿಂಧು’ ಮೊಬೈಲ್ ಆ್ಯಪ್ ಹಾಗೂ ಮುದ್ರಿತ ಘೋಷಣಾ ಪತ್ರಗಳ ಮೂಲಕ ದತ್ತಾಂಶವನ್ನು ಸಂಗ್ರಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಫಲಾನುಭವಿಗಳ ಜಾತಿ ಪ್ರಮಾಣಪತ್ರ ಅಥವಾ ಪ್ರವರ್ಗದ ಮಾಹಿತಿಯನ್ನು ಕೇಳಲಾಗುತ್ತಿದೆ ಎಂಬ ಅಂಶ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಒಂದು ವೇಳೆ ಯಾವುದೇ ಫಲಾನುಭವಿಗೆ ತಮ್ಮ ಜಾತಿ ಅಥವಾ ಪ್ರವರ್ಗದ ವಿವರಗಳನ್ನು ಹಂಚಿಕೊಳ್ಳಲು ಇಷ್ಟವಿಲ್ಲದಿದ್ದರೆ, ಅಂತಹ ಸಂದರ್ಭಗಳಿಗಾಗಿಯೇ ಮೊಬೈಲ್ ಅಪ್ಲಿಕೇಶನ್‌ನಲ್ಲಿ ವಿಶೇಷ ಆಯ್ಕೆಯನ್ನು ನೀಡಲಾಗಿದೆ. ಸಿಬ್ಬಂದಿಯು ಆ್ಯಪ್‌ನಲ್ಲಿ ಲಭ್ಯವಿರುವ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನು ಗುರುತಿಸುವ ಮೂಲಕ ಮುಂದಿನ ಪ್ರಕ್ರಿಯೆ ಮುಂದುವರಿಸಬಹುದು ಎಂದು ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಬೆಸ್ಕಾಂ ವಿವರಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now