Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹ ಜ್ಯೋತಿ ಯೋಜನೆ; ಮನೆ ಬಾಗಿಲಿಗೆ ಬರಲಿದ್ದಾರೆ ಬೆಸ್ಕಾಂ ಮೀಟರ್ ರೀಡರ್ಸ್, ಈ ದಾಖಲೆ ಸಿದ್ದವಾಗಿಟ್ಟುಕೊಳ್ಳಿ!

---Advertisement---

ಬೆಂಗಳೂರು.ಜುಲೈ.03: ಗೃಹ ಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮತ್ತು ಸೌಲಭ್ಯವನ್ನು ಸುಲಭವಾಗಿ ಮುಂದುವರಿಸಲು ಬೆಸ್ಕಾಂ (BESCOM) ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ, ಬದಲಿಗೆ ಬೆಸ್ಕಾಂ ಮೀಟರ್ ರೀಡರ್ ಗಳೇ ನೇರವಾಗಿ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ.

ಮೀಟರ್ ರೀಡರ್ ಗಳು ಸಾರ್ವಜನಿಕರ ಮನೆಗೆ ಭೇಟಿ ನೀಡಿ, ಸ್ಥಳದಲ್ಲೇ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಮೊಬೈಲ್ ಅಪ್ಲಿಕೇಶನ್ ಮೂಲಕ ದಾಖಲೆಗಳನ್ನು ಅಪ್ಲೋಡ್ ಮಾಡಿ, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಹಕರಿಗೆ ಸಂಪೂರ್ಣ ನೆರವು ನೀಡಲಿದ್ದಾರೆ. ಈ ಪ್ರಕ್ರಿಯೆಯು ಸರಾಗವಾಗಿ ನಡೆಯಲು ಗ್ರಾಹಕರು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಹಕರಿಸಬೇಕಾಗಿ ಕೋರಲಾಗಿದೆ.

ಸಿದ್ಧವಾಗಿಟ್ಟುಕೊಳ್ಳಬೇಕಾದ ಅಗತ್ಯ ದಾಖಲೆಗಳು:

ಮನೆಗೆ ಬರುವ ಮೀಟರ್ ರೀಡರ್ ಗಳಿಗೆ ಸಲ್ಲಿಕೆ ಮಾಡಲು ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ:
ಆಧಾರ್ ಕಾರ್ಡ್

ವೋಟರ್ ಐಡಿ

ರೇಷನ್ ಕಾರ್ಡ್ (ಪಡಿತರ ಚೀಟಿ)

ಪಾನ್ ಕಾರ್ಡ್

ಜಾತಿ ಪ್ರಮಾಣ ಪತ್ರ (ಕಡ್ಡಾಯವಲ್ಲ)

ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಬಾಡಿಗೆ ಒಪ್ಪಂದ ಪತ್ರ (ಅನ್ವಯಿಸುವವರಿಗೆ ಮಾತ್ರ)

ಗಮನಿಸಿ: ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂನ 24×7 ಉಚಿತ ಸಹಾಯವಾಣಿ ಸಂಖ್ಯೆ 1912 ಅನ್ನು ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now