ದಾವಣಗೆರೆ ಜು.10 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಹ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ( National Portal for Transgender persons ) ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್ ಕಾರ್ಡ್ ನೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ, ಕುವೆಂಪು ನಗರ, ಎಂ.ಸಿ.ಸಿ. ಬಿ. ಬ್ಲಾಕ್, 14 ನೇ ಮುಖ್ಯ ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜಾನಾಯ್ಕ್ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…