ಬೆಂಗಳೂರು: ಕಾಂಗ್ರೆಸ್ ಸರ್ಕಾರ ಈಗಾಗಲೇ ತಾನೂ ಭತವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ನಡೆಸುತ್ತಿದೆ. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆ ಲಾಭವನ್ನು ಮಹಿಳೆಯರು ಪಡೆಯುತ್ತಿದ್ದಾರೆ. ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆಯಾಗುತ್ತಿದೆ. ಇದರ ನಡುವೆ ಎಲ್ಲರು ಕೇಳುತ್ತಿರುವುದು ಗೃಹಲಕ್ಷ್ಮೀ ಯಾವಾಗ ಅನ್ನೋದು.
ಇತ್ತೀಚೆಗಷ್ಟೇ ಅದಕ್ಕೆ ಸಂಬಂಧಿಸಿದಂತ ಆ್ಯಪ್ ತಯಾರಾಗಿಲ್ಲ. ಇನ್ನು ತಡವಾಗಬಹುದು ಎನ್ನಲಾಗಿತ್ತು. ಇದೀಗ ಇಂದಿನ ಸಚಿವ ಸಂಪುಟ ಸಭೆಯ ಬಳಿಕ ಯೋಜನೆಗೆ ಚಾಲನೆ ಸಿಗಬಹುದು ಎನ್ನಲಾಗಿದೆ. ಕ್ಯಾಬಿನೆಟ್ ಸಭೆಯ ಬಳಿಕ ಯೋಜನೆ ಬಗ್ಗೆ ಹೇಳುವ ಸಾಧ್ಯತೆ ಇದೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಭೆ ಸಂಪುಟ ನಡೆಯಲಿದೆ. ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಜಾರಿ ಬಗ್ಗೆ ಹೆಚ್ಚಿನ ಚರ್ಚೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆ ಆಪ್ ಬಗ್ಗೆ ಚರ್ಚೆ ಸಾಧ್ಯತೆ ಇದ್ದು, ಸರ್ವ ಸಮಸ್ಯೆಗೆ ಕಡಿವಾಣ ಹಾಕಲು ತೀರ್ಮಾನ ಮಾಡಲಾಗುತ್ತದೆ.