Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹ ಜ್ಯೋತಿ ಜುಲೈ 1 ರಿಂದ ಫಲಾನುಭವಿಗಳ ಪರಿಶೀಲನೆ ಆರಂಭ

---Advertisement---

ಸುದ್ದಿಒನ್, ಬೆಂಗಳೂರು, ಜೂನ್‌. 30 : ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ.

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.
ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ. ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now