Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಯೋಜನೆ: 2026-27ನೇ ಸಾಲಿನ ಕಂತಿಗೆ ₹2,500 ಕೋಟಿ ಅನುದಾನ ಬಿಡುಗಡೆ

---Advertisement---

ಬೆಂಗಳೂರು.ಸೆಪ್ಟೆಂಬರ್.12: ರಾಜ್ಯದ ಕೋಟ್ಯಂತರ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾಭಿಮಾನಿ ಬದುಕಿಗೆ ಆಸರೆಯಾಗಿರುವ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹೊಸ ಕಂತಿಗಾಗಿ ರಾಜ್ಯ ಸರ್ಕಾರ ಬರೋಬ್ಬರಿ ₹2,500 ಕೋಟಿ ಅನುದಾನ ಬಿಡುಗಡೆ ಮಾಡಿದೆ.

2026-27ನೇ ಸಾಲಿನ ಈ ಕಂತಿನ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಜಮೆ ಮಾಡಲು ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

 

ನಾಡಿನ ಮಹಿಳೆಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಉದ್ದೇಶದಿಂದ ಜಾರಿಗೆ ತರಲಾದ ಈ ಯೋಜನೆಯಡಿ, ಇದುವರೆಗೆ ಒಟ್ಟು 1.24 ಕೋಟಿ ಅರ್ಹ ಮಹಿಳೆಯರಿಗೆ ಯಶಸ್ವಿಯಾಗಿ ಧನಸಹಾಯ ತಲುಪಿಸಲಾಗಿದೆ. ಮಹಿಳೆಯರ ಸ್ವಾವಲಂಬನೆಗೆ ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸುತ್ತಿದ್ದು, ಜನಪರ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ಮುಂದುವರಿಯಲಿವೆ ಎಂದು ತಿಳಿಸಲಾಗಿದೆ.

Join WhatsApp

Join Now

Join Telegram

Join Now