ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀಯೂ ಒಂದು. ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡುವ ಯೋಜನೆಯದು. ಹೀಗಾಗಿ ಎಲ್ಲಾ ಮನೆಯ ಯಜಮಾನಿಯರು ಕಾಯುತ್ತಿದ್ದಾರೆ. ಅದಕ್ಕೆ ಈಗ ಕಾಲ ಕೂಡಿ ಬಂದಂತೆ ಆಗಿದೆ.
ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಜುಲೈ 16 ರಂದು ಯೋಜನೆಗೆ ಚಾಲನೆ ಸಿಗಲಿದೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರಿಂದ ಚಾಲನೆ ಸಿಗಲಿದೆ. ಜುಲೈ 16 ರಿಂದ 18ರ ತನಕ ಪ್ರತಿಪಕ್ಷ ನಾಯಕರ ಅಭೆ ನಡೆಯಲಿದೆ. ಈ ಸಭೆಯ ನಡುವೆ ಗೃಹಲಕ್ಷ್ಮೀ ಯೋಜನೆಗೆ ಜಾರಿ ನೀಡುವ ಪ್ಲ್ಯಾನ್ ನಡೆಯುತ್ತಿದೆ.
ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 14 ರಂದು ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು.