Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

GST ದರ ಇಳಿಕೆ.. ಆದರೆ.. ವಾಣಿಜ್ಯ ಬಳಕೆ ದರ ಏರಿಕೆ : ಜನ ಸುಸ್ತು..!

---Advertisement---

 

ಬೆಂಗಳೂರು: ಇಷ್ಟು ದಿನಗಳ ಕಾಲ ಜಿಎಸ್ಟಿ ಕಟ್ಟಿ ಕಟ್ಟಿನೆ ಸಾಮನ್ಯ ಜನ ಸುಸ್ತಾಗಿ ಹೋಗಿದ್ದರು. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಜಿಎಸ್ಟಿ ದರ ಇಳಿಕೆ ಮಾಡಿದ ಮೇಲೆ ಸಾಮಾನ್ಯ ಜನ ಕೊಂಚ ರಿಲ್ಯಾಕ್ಸ್ ಆದ್ರು. ಆದರೆ ನೋಡ ನೋಡುತ್ತಲೇ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಲು ನಿರ್ಧಾರ ಮಾಡಿದೆ. ಈಗಾಗಲೇ ಈ ಸಂಬಂಧ ಪ್ರಕಟಣೆ ಕೂಡ ಹೊರಡಿಸಿದೆ. ಇದನ್ನ ನೋಡಿದ ಸಾಮಾನ್ಯ ಜನರಿಗೆ ಶಾಕ್ ಹೊಡೆದಂತೆ ಆಗಿದೆ.

ಈ ಸಂಬಂಧ ಸಾರ್ವಜನಿಕರ ಗಮನಕ್ಕೂ ಬಿಡಲಾಗಿದೆ. ಸಾರ್ವಜನಿಕರನ್ನು ಅಭಿಪ್ರಾಯ ಕೇಳಿದೆ. ಅದಕ್ಕಾಗಿ ಒಂದು ತಿಂಗಳ‌ ಕಾಲವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ ಒಡೆತನದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳು ಕೃಷಿ ಪಂಪ್ ಸೆಟ್ ಗೆ ವಿದ್ಯುತ್ ದರ ಕಡಿಮೆ ಮಾಡಿ, ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ ಗೆ 10 ಪೈಸೆಯಿಂದ 1ರೂಪಾಯಿ ಹೆಚ್ಚಿಸಿಕೊಡುವಂತೆ ಆಯೋಗಕ್ಕೆ ಸಲ್ಲಿಸುವ ಮೇಲ್ಮನವಿಗೆ ಈಗಾಗಲೇ ಎಫ್ ಕೆಸಿಸಿಐ ಮತ್ತು ಕಾಸಿಯಾ ಸೇರಿದಂತೆ ಹಲವು ವಾಣಿಜ್ಯ ಸಂಸ್ಥೆಗಳಿಂದ ತಕರಾರು ಅರ್ಜಿ ಸಲ್ಲಿಸಲಾಗಿದೆ. ಎರಡು ವರ್ಷಗಳ ಹಿಂದೆ ಕೆಇಆರ್ಸಿ ವಿದ್ಯುತ್ ದರ ಪರಿಷ್ಕರಣೆಗೆ ಮುನ್ನ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರ ಮೇಲಿರುವ ಕ್ರಾಸ್ ಸಬ್ಸಿಡಿ ಕಡಿಮೆ ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿತ್ತು.

 

ಆದರೆ ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರಲಿಲ್ಲ. ವಿದೇಶಿ ಬಂಡವಾಳ ಹರಿದು ಬರುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನ ಗಳಿಸಿದೆ. ಒಂದು ವೇಳೆ ಕೆಇಆರ್ಸಿ ಕೈಗಾರಿಕಾ ಮತ್ತು ವಾಣಿಜ್ಯ ಬಳಕೆದಾರರಿಗೆ ವಿದ್ಯುತ್ ದರ ಹೆಚ್ಚಿಸಿದರೆ ಹೊರ ರಾಜ್ಯಗಳಿಂದ ಹೊರ ರಾಜ್ಯಗಳಿಂದ ಕೈಗಾರಿಕೆ ಬರುವುದು ನಿಲ್ಲುವುದಲ್ಲದೆ ಸ್ಥಳೀಯ ಕೈಗಾರಿಕೆಗಳು ಉತ್ಪಾದನೆ ಕಡಿಮೆ ಮಾಡಲಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now