Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಿಎಸ್‌ಟಿ ಇಳಿಕೆ ಓಕೆ, ಮೊದಲೇ ಮಾಡಲಿಲ್ಲ ಯಾಕೆ ? ಶಾಸಕ ಎನ್‌.ಎ ಹ್ಯಾರಿಸ್‌ ಪ್ರಶ್ನೆ

---Advertisement---

 

ಸುದ್ದಿಒನ್, ಬೆಂಗಳೂರು, ಸೆಪ್ಟೆಂಬರ್. 04 :  ಕೇಂದ್ರ ಸರ್ಕಾರವು ಸರಕು ಮತ್ತು ಸೇವೆಗಳ ಮೇಲೆ ಜಿಎಸ್‌ಟಿ ಇಳಿಕೆ ಮಾಡಿರುವ ಕ್ರಮವನ್ನು ಸ್ವಾಗತಿಸಿರುವ ಶಾಂತಿನಗರ ಶಾಸಕರಾದ ಎನ್‌.ಎ. ಹ್ಯಾರಿಸ್‌ ಅವರು ಇದು ತುಂಬಾ ತಡವಾಗಿ ತೆಗೆದುಕೊಂಡ ನಿರ್ಧಾರವಾಗಿದೆ. ಇದೊಂದು ರೀತಿ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಿದೆ ಎಂದು ವಿಮರ್ಶೆ ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಹ್ಯಾರಿಸ್‌ ಅವರು, “ಕಳೆದ 8 ವರ್ಷಗಳಲ್ಲಿ ಶ್ರೀಸಾಮಾನ್ಯರು ದುಬಾರಿ ತೆರಿಗೆಯಿಂದ ಸಂಕಷ್ಟಕ್ಕೆ ಒಳಗಾದರು, MSME ಕ್ಷೇತ್ರ, ಸಣ್ಣ ಪುಟ್ಟ ವ್ಯಾಪಾರಿಗಳು ಭಾರೀ ನಷ್ಟದ ಪರಿಣಾಮವಾಗಿ ತಮ್ಮ ವ್ಯಾಪಾರವನ್ನೇ ನಿಲ್ಲಿಸಿದರು. ಕೇಂದ್ರ ಸರ್ಕಾರಕ್ಕೆ ಆಗಲೇ ತನ್ನ ತಪ್ಪಿನ ಅರಿವಾಗಬೇಕಿತ್ತು. ಹಾಗಾಗಿ ಕೇಂದ್ರ ಸರ್ಕಾರದ ಈ ನಡೆ ಖಂಡಿತವಾಗಿಯೂ ಮಾಸ್ಟರ್‌ ಸ್ಟ್ರೋಕ್‌ ಅಲ್ಲ, ಬದಲಾಗಿ ಕೆಟ್ಟ ಮೇಲೆ ಬುದ್ದಿ ಬಂದಿದೆ ಅಷ್ಟೆ”, ಎಂದು ಹೇಳಿದ್ದಾರೆ.

“ಜಿಎಸ್‌ಟಿ ಚರ್ಚೆ ಆರಂಭವಾದಾಗಿನಿಂದಲೇ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು 18% ಅಥವಾ ಅದಕ್ಕಿಂತ ಕಡಿಮೆ ಪ್ರಮಾಣದ ಜಿಎಸ್‌ಟಿ ವಿಧಿಸುವಂತೆ ಆಗ್ರಹಿಸಿದ್ದರು. ಆದರೂ, ನಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಕಿವಿಗೊಡಲಿಲ್ಲ. 9 ಬಗೆಯ ತೆರಿಗೆ ಸ್ಲ್ಯಾಬ್‌ಗಳ ಮೂಲಕ ಜನರ ಬದುಕನ್ನೇ ನರಕವಾಗಿಸಲಾಯಿತು. ಕನಿಷ್ಠ ಈಗಲಾದರೂ ಜಿಎಸ್‌ಟಿ ಇಳಿಕೆ ಮಾಡಿರುವುದು ಸಮಾಧಾನಕರ ಅಷ್ಟೆ, ಜನಸಾಮಾನ್ಯರ ಬದುಕು ಸುಗಮವಾಗಲು ಹಾಗೂ ಆರ್ಥಿಕ ಪರಿಸ್ಥಿತಿ ಮರಳಿ ಹಳಿಗೆ ಬರಲು ಜಿಎಸ್‌ಟಿ ಇನ್ನಷ್ಟು ಇಳಿಸುವ ಅವಶ್ಯಕತೆ ಇದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...