ಜೆಡಿಎಸ್ ಕೋರ್ ಕಮಿಟಿಯಿಂದ ಜಿಟಿ ದೇವೇಗೌಡ ಔಟ್ : ನೂತನ ಅಧ್ಯಕ್ಷ ಯಾರು..?

1 Min Read

ಜೆಡಿಎಸ್ ನಲ್ಲಿ ಒಂದಷ್ಟು ಬದಲಾವಣೆಗಳು ಆಗಿದೆ. ಅದರಲ್ಲೂ ಕೋರ್ ಕಮಿಟಿಯ ಅಧ್ಯಕ್ಷರನ್ನೇ ಬದಲಾಯಿಸಿದ್ದು ನೂತನ ಅಧ್ಯಕ್ಷರನ್ನ ನೇಮಕ ಮಾಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಮಿತಿಯನ್ನು ಪುನರ್ ರಚನೆ ಮಾಡಿದ್ದಾರೆ. ಈಗ ನೂತನ ಅಧ್ಯಕ್ಷರಾಗಿ ಚಿಂತಾಮಣಿಯ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ.ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ‌.

ಜೊತೆಗೆ ಅರಕಲಗೂಡು ಶಾಸಕ ಎ.ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನು ನೇಮಕ ಮಾಡಲಾಗಿದೆ‌. ಮಾಜಿ ಶಾಸಕ ರಾಜವೆಂಕಟಪ್ಪ ನಾಯಕ ದೊಋ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸಂಸದ ಎಂ.ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿಸಿ ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ಸಿಎಸ್ ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್.ಶಿವಶಂಕರ್, ಕೆ.ಎಂ.ತಿಮ್ಮರಾಯಪ್ಪ, ಎ.ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆಜಿ ಪ್ರಸನ್ನ ಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣು ಗೌಡ ಕಂದಕೂರ, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿವಿ ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಶಿಸ್ತುಪಾಲನಾ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಶ್ರೀ ಡಿ.ನಾಗರಾಜಯ್ಯರನ್ನು ನೇಮಕ ಮಾಡಲಾಗಿದೆ‌. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತಾ ಅವರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ಜಿಡಿ ದೇವೇಗೌಡ ಅವರು ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು.

Share This Article