Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಟಿಟಿಸಿ ಡಿಪ್ಲೊಮಾ ಕೋರ್ಸ್‍ಗಳಿಂದ ಉಜ್ವಲ ಭವಿಷ್ಯ : ಪಿ.ರಘು

---Advertisement---

ಚಿತ್ರದುರ್ಗ. ಮೇ. 08: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಜಿಟಿಟಿಸಿಯ ಡಿಪ್ಲೊಮಾ ಕೋರ್ಸ್‍ಗಳ ಸದುಪಯೋಗ ಪಡೆದುಕೊಂಡಲ್ಲಿ ಶೇ. 100ರಷ್ಟು ಉದ್ಯೋಗದೊಂದಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತಿಳಿಸಿದರು.

ನಗರದ ಹಳೆಯ ಬೆಂಗಳೂರು ರಸ್ತೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಗುರುವಾರ ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಕಾಲೇಜಿನ ವಿವಿಧ ಪ್ರಾಯೋಗಿಕ ಲ್ಯಾಬ್‍ಗಳು ಮತ್ತು ಕಾರ್ಯಾಗಾರಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಇಲ್ಲಿನ ದೀರ್ಘಾವಧಿ ಮತ್ತು ಅಲ್ಪಾವಧಿ ಡಿಪ್ಲೊಮಾ ಕೋರ್ಸ್‍ಗಳು ಪ್ರಸ್ತುತ ತಾಂತ್ರಿಕ ಯುಗದಲ್ಲಿ ಅತ್ಯಂತ ಮಹತ್ವದ್ದಾಗಿವೆ. ಬಯಲು ಸೀಮೆಯ ಚಿತ್ರದುರ್ಗ ಜಿಲ್ಲೆಯಲ್ಲಿ ಇಂತಹ ಸಂಸ್ಥೆ ಇರುವುದು ಹೆಮ್ಮೆಯ ವಿಷಯವಾಗಿದ್ದು, ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ತಾಂತ್ರಿಕ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವುದರಿಂದ ಶೀಘ್ರವಾಗಿ ಉದ್ಯೋಗ ಮಾರುಕಟ್ಟೆಗೆ ತೆರೆದುಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಹೋಬಲ ಟಿ.ವಿ.ಎಸ್. ಮಾಲೀಕ ಪಿ.ಎ.ಅರುಣ್‍ಕುಮಾರ್, ಕಾಲೇಜಿನ ಪ್ರಾಂಶುಪಾಲ ಸುಹಾಸ್ ಬಿ.ಎಸ್., ಆಡಳಿತಾಧಿಕಾರಿ ಕೆ. ಪಿ. ಕಾಟೇಗೌಡ ಹಾಗೂ ಉಪನ್ಯಾಸಕರಾದ ಪ್ರವೀಣ್ ಟಿ., ಚೇತನ್ ಟಿ., ಸುರೇಶ್ ನಾಯಕ್ ಎಂ. ಜೆ., ಸತೀಶ್ ಎಂ. ಎನ್., ಪ್ರದೀಪ್ ಜಿ. ಎಂ. ಮತ್ತು ವಿದ್ಯಾಶ್ರೀ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now