Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : ಹೆಚ್.ಎಂ.ರೇವಣ್ಣ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 17 : ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಪರಿಷ್ಕರಣೆ ಮಾಡುತ್ತೇವೆಂದು ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ
ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ತಿಳಿಸಿದರು.

 

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತ 2023 ರ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಕೂಡಲೆ ಪಂಚ ಗ್ಯಾರೆಂಟಿಗಳನ್ನು ಮಂಜೂರು ಮಾಡಿದರು. ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ, ಅನ್ನಭಾಗ್ಯ, ಇವುಗಳೆಲ್ಲಾ ಬಡವರ ಬಾಳಿಗೆ ಆಶಾಕಿರಣವಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದರು. ಈಗ ನೆಮ್ಮದಿಯಿಂದಿದ್ದಾರೆ. ಒಂದು ಲಕ್ಷ 39 ಸಾವಿರ ಕೋಟಿ ರೂ.ಗಳು ಗೃಹಲಕ್ಷ್ಮಿ ಯೋಜನೆಯಡಿ ಬಡವರ ಖಾತೆಗಳಿಗೆ ಜಮಾ ಆಗಿದೆ. ಒಂದು ಲಕ್ಷ 40 ಸಾವಿರ ಮೃತ ಮಹಿಳೆಯರ ಖಾತೆಗಳಿಗೆ 79 ಕೋಟಿ ರೂ. ಹೋಗಿತ್ತು. ಆ ಹಣವನ್ನು ವಾಪಾಸ್ ಪಡೆಯಲು ಪ್ರಯತ್ನಿಸುತ್ತಿದ್ದೇವೆಂದು ಹೇಳಿದರು.

 

ಮೃತರ ಖಾತೆಗಳಿಗೆ ಹಣ ಹೋಗಿದ್ದನ್ನು 2024 ರಿಂದ ನಿಲ್ಲಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸುತ್ತದೆಂದು ವಿರೋಧಿಗಳು ಅಪ ಪ್ರಚಾರದಲ್ಲಿ ತೊಡಗಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಯಾವುದೆ ಕಾರಣಕ್ಕೂ ಉಚಿತ ಗ್ಯಾರೆಂಟಿಗಳನ್ನು ನಿಲ್ಲಿಸುವುದಿಲ್ಲ. ಮುಂದುವರೆಸುತ್ತಾರೆ. ಯಾರು ಆತಂಕ ಪಡುವುದು ಬೇಡ. ಈಗಾಗಲೆ 39 ಕಂತುಗಳನ್ನು ಕೊಟ್ಟಿದ್ದೇವೆ. ಇದರಿಂದ ಮಹಿಳಾ ಸಬಲೀಕರಣವಾಗಿದೆ ಎಂದರು.

 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್‍ರವರು ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಜಿಲ್ಲೆಯಿಂದ ವಿವಿಧ ಮುಂಚೂಣಿ ಘಟಕಗಳು ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಚ್.ಎಂ.ರೇವಣ್ಣ ಮನವಿ ಮಾಡಿದರು.

 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಅಬ್ದುಲ್ಲಾ, ಚಾಂದ್‍ಪೀರ್, ಮುದಸಿರ್ ನವಾಜ್, ಪ್ರಕಾಶ್ ಬೆನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ ಭೂತೇಶ್, ಇಂದಿರಾ, ಆರ್.ಪ್ರಕಾಶ್, ಶಬ್ಬೀರ್‍ಭಾಷಾ. ನರಹರಿ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now