
ಬೆಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರು ಪ್ರಜಾಧ್ವನಿ ಕಾರ್ಯಕ್ರಮ ಬಡೆಸುತ್ತಿದ್ದಾರೆ. ಅದಕ್ಕಾಗಿ ಜಿಲ್ಲೆ ಜಿಲ್ಲೆಗೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಸ್ ಯಾತ್ರೆ ಸಾಗಿದೆ. ಆದ್ರೆ ಈ ಬಸ್ ಪಂಕ್ಚರ್ ಆಗೋದು ಗ್ಯಾರಂಟಿ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಬಸ್ ಯಾತ್ರೆ ಪಂಕ್ಚರ್ ಆಗುವುದರಲ್ಲಿ ಅನುಮಾನವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಯಾತ್ರೆ ಬಸ್ ನಲ್ಲಿ ಪರಮೇಶ್ವರ್ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ನಾನು, ಸಿಎಂ ಮತ್ತು ಅಧ್ಯಕ್ಷರು ಮೂರು ತಂಡಗಳಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಹೆಚ್ಚು ಸ್ಥಾನ ಗೆದ್ದು ಯಾರನ್ನು ಅವಲಂಬಿಸದೆ ಸರ್ಕಾರ ರಚಿಸುತ್ತೇವೆ. ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

GIPHY App Key not set. Please check settings