Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಬ್ಬಿ : ಎಸ್. ಕೊಡಗೀಹಳ್ಳಿ ಗ್ರಾ. ಪಂ. ಅಧ್ಯಕ್ಷರಾಗಿ ಮಂಜಮ್ಮ ಅವಿರೋಧ ಆಯ್ಕೆ

Facebook
Twitter
Telegram
WhatsApp

ಗುಬ್ಬಿ : ತಾಲ್ಲೂಕಿನ ಕಸಬಾ ಹೋಬಳಿಯ ಎಸ್.   ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ವೆಂಕಟರಂಗನ್ ನಡೆಸಿದರು.

ಈ ಹಿಂದೆ ಇದ್ದ ಅಧ್ಯಕ್ಷೆ ಸ್ಥಾನಕ್ಕೆ ಗಂಗನರಸಮ್ಮ ರಾಜೀನಾಮೆ ನೀಡಿ  ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜಮ್ಮ 19 ಜನ ಸದಸ್ಯರ ಪೈಕಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಸರ್ವ ಸದಸ್ಯರ ಸಮ್ಮುಖದಲ್ಲಿ ಅವಿರೋಧವಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷೆ ಮಂಜಮ್ಮ  ಮಾತನಾಡಿ ನಾನು ಸರ್ವ ಸದಸ್ಯರ ಒಪ್ಪಿಗೆ ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಚರಂಡಿ, ರಸ್ತೆ, ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತೇನೆ ಹಾಗೂ ಮೂಲಭೂತ ಸೌಕರ್ಯಗಳು ಮತ್ತು ಸ್ವಚ್ಛತೆಯ ಕಡೆಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಆರ್ ಮಾತನಾಡಿ ವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರ ಜೊತೆಗೂಡಿ ಸರ್ಕಾರದಿಂದ ಬರುವಂತಹ ಸೌಲಭ್ಯಗಳನ್ನು ಬಳಸಿಕೊಂಡು ನಮ್ಮ ಗ್ರಾಮ ಪಂಚಾಯಿತಿಯನ್ನು ಅಭಿವೃದ್ಧಿಪಡಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಂಬುಜಮ್ಮ , ಪಿಡಿಒ ಶಶಿಧರ್ ಮತ್ತು ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಮುಖಂಡರುಗಳಾದ ದಿವಾಕರ್, ಕೆಜಿ ಗಿರೀಶ್, ಪಾಂಡುರಂಗಯ್ಯ, ವೆಂಕಟೇಶ್, ಶ್ರೀನಿವಾಸ್, ಗೋಪಾಲ್,  ಮಹದೇವ್, ಬಿಲ್ ಕಲೆಕ್ಟರ್ ಗಿರೀಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!