ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಪ್ರತಿಭಟನೆಗಿಳಿದಿದ್ದಾರೆ. ರಾಜ್ಯದ 444ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ರಾಜ್ಯಾದ್ಯಂತ ತರಗತಿಗಳನ್ನ ಬಹಿಷ್ಕರಿಸಿ, 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು, ವೇತನ ರಹಿತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಕೆಲಸ ಖಾಯಂ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.
ಕನಿಷ್ಠ ವೇತನ ನೀಡಬೇಕು, ಸೇವಾ ಆಧಾರದ ಮೇಲೆ ಖಾಯಂ ಕೆಲಸ ನೀಡಬೇಕು ಎಂದು ಅತಿಥಿ ಉಪ್ಯಾಸಕರು ಹಲವು ಬೇಡಿಕೆಗಳನ್ನ ಇಟ್ಟಿದ್ದಾರೆ. ಮುಂದಿನ ಬೆಳಗಾವಿ ಅಧಿವೇಶನ ನಡೆಯುವ ವೇಳೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.