Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈದ್ – ಮಿಲಾದ್ ಹಬ್ಬದ ಆಚರಣೆ: ಮಾರ್ಗಸೂಚಿ ಪ್ರಕಟ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.16) : ಕೋವಿಡ್-19 ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸಕ್ತ ಈದ್-ಮಿಲಾದ್ (ಮಿಲಾದುನ್-ನಬಿ) ಹಬ್ಬವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಅಕ್ಟೋಬರ್19ರಂದು ಈದ್-ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್-19ರ ಸೋಂಕು ನಿಯಂತ್ರಣ ತಡೆಗಟ್ಟಲು ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಆದೇಶದನ್ವಯ ಈದ್-ಮಿಲಾದ್ ಹಬ್ಬವನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲು ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ಷರತ್ತುಗಳು: ಅಕ್ಟೋಬರ್ 19ರಂದು ಈದ್-ಮಿಲಾದ್(ಮಿಲಾದುನ್-ನಬಿ) ಹಬ್ಬದ ಆಚಣೆಯಲ್ಲಿ ಸಾಮೂಹಿಕ ಮೆರವಣಿಗೆ (ಜುಲೂಸ್) ನಿಷೇಧಿಸಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದು. ಮಸೀದಿಗಳು ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19ರ ಶಿಷ್ಟಾಚಾರಗಳೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಈದ್ ಮಿಲಾದ್ ಆಚರಣೆ ನೆರವೇರಿಸುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು ಡಿಜಿಟಲ್ ಸೌಂಡ್ ಸಿಸ್ಟಮ್(ಡಿಜೆ)ನ ಬಳಕೆಯನ್ನು ನಿಷೇಧಿಸಿದೆ.

ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಧರಿಸತಕ್ಕದ್ದು ಮತ್ತು ಮುಖಗವಸನ್ನು ಧರಿಸದೇ ಸೇರಿತಕ್ಕಂತಹ ಸಾರ್ವಜನಿಕರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರೀಕರು ಮತ್ತು 10 ವರ್ಷದೊಳಗಿನ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಹಬ್ಬವನ್ನು ಆಚರಿಸತಕ್ಕದು. ಸ್ಯಾನಿಟೈಸೇಷನ್ ಹಾಗೂ ವಾಷ್‍ನೊಂದಿಗೆ ಕೈತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡುವುದು, ಕೋವಿಡ್-19 ಸಮುಚ್ಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆಯನ್ನು ನೆಡೆಸತಕ್ಕದ್ದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ 2 ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು.

ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳತಕ್ಕದ್ದು ಆಗಾಗ್ಗ, ಕೈಗಳನ್ನು ಸೋಪು ಮತ್ತು ಸ್ಯಾನಿಟೈಜರ್‍ಗಳಿಂದ ಶುಚಿಗೊಳಿಸತಕ್ಕದ್ದು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು. ಮಸೀದಿಗಳಲ್ಲಿ ಪ್ರಾರ್ಥನೆಗಳಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾನಿಮಾಜ್) ಕಡ್ಡಾಯವಾಗಿ ತರತಕ್ಕದ್ದು, ಪರಸ್ಪರ ಹಸ್ತಲಾಘವ ಮತ್ತು ಆಲಿಂಗನವನ್ನು ಮಾಡತಕ್ಕದ್ದಲ್ಲ. ಮಸೀದಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ ಸಮುದಾಯ ಭವನ ಶಾದಿ ಮಹಾಲ್ ಮತ್ತಿತರ ತೆರದ ಜಾಗಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾಮಾಜಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.

ಖಬರಸ್ಥಾನದಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ಸಾರ್ವಜನಿಕ ಭಾಷಣಾ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ. ಈ ಮೇಲ್ಕಂಡ ಆದೇಶವನ್ನು ಜಿಲ್ಲೆಯಾದ್ಯಂತ ಜಾರಿಗೊಳಿಸಿ ಆದೇಶಿಸಿಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಅಡಿಯಲ್ಲಿ ಶಿಸ್ತಿನ, ಕಾನೂನಿನ ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!