ಸುದ್ದಿಒನ್ ಲೈವ್ ಅಪ್ಡೇಟ್

ಚುನಾವಣಾ ಆಯೋಗವು ಗುಜರಾತ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಬರಲಿದೆ ಎಂದು
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಚುನಾವಣಾ ದಿನಾಂಕ ಪ್ರಕಟಿಸುವ ಮುನ್ನ ಮೋರ್ಬಿ ಸೇತುವೆ ಕುಸಿತದ ಸಂತ್ರಸ್ತರಿಗೆ ಸಂತಾಪ ಸೂಚಿಸಿದರು. ಕಳೆದ ಭಾನುವಾರ ನಡೆದ ಘಟನೆಯಲ್ಲಿ ಕನಿಷ್ಠ 135 ಜನರು ಸಾವನ್ನಪ್ಪಿದ್ದರು.
ಈ ವರ್ಷ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಅವರು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕೂ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ 160 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ರಾಜ್ಯಕ್ಕೆ ನಿಯೋಜಿಸಿದೆ.
182 ಸದಸ್ಯರ ರಾಜ್ಯ ವಿಧಾನಸಭೆಯ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. ಇಂದು ಗುಜರಾತ್ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ, ಮಾದರಿ ನೀತಿ ಸಂಹಿತೆ ರಾಜ್ಯದಲ್ಲಿ ಜಾರಿಗೆ ಬರಲಿದೆ.

