ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 182 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆಯೊಂದಿಗೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) 151 ಸ್ಥಾನಗಳ ಸಾರ್ವಕಾಲಿಕ ದಾಖಲೆಯತ್ತ ದಾಪುಗಾಲಿಡುತ್ತಿದೆ.
ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ 152, ಕಾಂಗ್ರೆಸ್ 20, ಏಪಿ 06 ಮತ್ತು ಇತರರು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಈಗಾಗಲೇ 15 ಕ್ಷೇತ್ರದಲ್ಲಿ ಮತ ಎಣಿಕೆ ಮುಗಿದಿದ್ದು ಬಿಜೆಪಿ ಗೆಲುವು ದಾಖಲಿಸಿದೆ.
ಗುಜರಾತ್ 182 ಅಸೆಂಬ್ಲಿ ಸ್ಥಾನಗಳನ್ನು ಹೊಂದಿದೆ. ಮತ್ತು ಬಹುಮತಕ್ಕಾಗಿ 92 ಸ್ಥಾನಗಳ ಬೇಕು. ಎಕ್ಸಿಟ್ ಪೋಲ್ಗಳು ಬಿಜೆಪಿಯು ಸತತ ಏಳನೇ ಅವಧಿಯನ್ನು ಆರಾಮವಾಗಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದವು.
ಅತ್ತ ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ 40, ಬಿಜೆಪಿ 25 ಮತ್ತು ಇತರರು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುತೇಕ ಕಾಂಗ್ರೆಸ್ ಗದ್ದುಗೆ ಏರಲಿದೆ.