ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಫಲಿತಾಂಶ ದಿಕ್ಸೂಚಿ : ಜಿ.ಟಿ.ಸುರೇಶ್‍ ಸಿದ್ದಾಪುರ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,(ಡಿ.08): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ. ಏಳನೆ ಬಾರಿಗೆ ಗೆಲುವು ಸಾಧಿಸಿರುವುದಕ್ಕೆ ಇಲ್ಲಿನ ಬಿಜೆಪಿ.ಕಚೇರಿ ಎದುರು ಕಾರ್ಯಕರ್ತರು ಗುರುವಾರ ಸಿಹಿ ಹಂಚಿ ಸಂಭ್ರಮಿಸಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‍ಸಿದ್ದಾಪುರ ಮಾತನಾಡಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ157 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದು, ದೇಶದ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತ, ದಕ್ಷತೆಯನ್ನು ಅಲ್ಲಿನ ಮತದಾರರು ಮೆಚ್ಚಿ ಪಕ್ಷವನ್ನು ಏಳನೇ ಬಾರಿ ಗೆಲ್ಲಿಸಿರುವುದು ಸುಲಭದ ಕೆಲಸವಲ್ಲ. 2023 ರಲ್ಲಿ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಗುಜರಾತ್ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ದೇಶದ ಈಗಿನ ಪ್ರಧಾನಿ ನರೇಂದ್ರಮೋದಿರವರು ಗುಜರಾತ್ ರಾಜಕೀಯಕ್ಕೆ ಅಡಿಪಾಯ ಹಾಕಿ ಬೆಳೆಸಿ ಮಾರ್ಗದರ್ಶನ ನೀಡಿದ್ದರ ಫಲವಾಗಿ ಏಳನೆ ಸಾರಿ ಗುಜರಾತ್‍ನಲ್ಲಿ ನಮ್ಮ ಪಕ್ಷ ಗೆಲ್ಲಲು ಸಾಧ್ಯವಾಯಿತು. ಹಾಗಾಗಿ ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ. ಗೆದ್ದು ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಗುಜರಾತ್ ಚುನಾವಣಾ ಫಲಿತಾಂಶ ಕಾರ್ಯಕರ್ತರಲ್ಲಿ ಹುರುಪು ಉತ್ಸಾಹ ತುಂಬಿದೆ ಎಂದು ಹೇಳಿದರು.

ಬಿಜೆಪಿ.ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಉಪಾಧ್ಯಕ್ಷ ಕಲ್ಲೇಶಯ್ಯ, ಜಿಲ್ಲಾ ಕಾರ್ಯದರ್ಶಿ ಎ.ರೇಖ, ಖಚಾಂಚಿ ಮಾಧುರಿ ಗಿರೀಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ಶೈಲಜಾರೆಡ್ಡಿ, ಪ್ರಧಾನ ಕಾರ್ಯದರ್ಶಿ ನರೇಂದ್ರ, ವಕ್ತಾರ ನಾಗರಾಜ್‍ಬೇದ್ರೆ, ಕಿರಣ್, ಶಂಭು ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *