ಚಿತ್ರದುರ್ಗ, (ಡಿ.30) : ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ), ಬೆಂಗಳೂರು ಇದರ ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನಗರದ ಹೊರವಲಯದ ಮಾಳಪ್ಪನಹಟ್ಟಿ ಬಳಿ ಇರುವ ಸಾಮರ್ಥ್ಯ ಸೌಧದಲ್ಲಿ ನಡೆದ ಚುನಾವಣೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಗುಂಡಪ್ಪ ಎಂ, ಖಜಾಂಚಿಗಳಾಗಿ ಮಂಜ ನಾಯಕ್, ರಾಜ್ಯ ಪರಿಷತ್ ಸದಸ್ಯರಾಗಿ ಪಾತಪ್ಪ, ಉಪಾಧ್ಯಕ್ಷರಾಗಿ ಗಂಗಾಧರ್ ಕೊಣ್ಣೂರ್, ಮಹಿಳಾ ಉಪಾಧ್ಯಕ್ಷರಾಗಿ ಶೃತಿ ಈ, ಸಂಘಟನಾ ಕಾರ್ಯದರ್ಶಿಗಳಾಗಿ ಪ್ರದೀಪ್ ಹೆಚ್ ಆರ್, ಶಶಿಕಲಾ ಕೆ ಓ, ಕ್ರೀಡಾ ಕಾರ್ಯದರ್ಶಿಗಳಾಗಿ ವೀರೇಶ್ ಟಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಗೌತಮಿ ಈ, ರವರು ಮುಂದಿನ ಮೂರು ವರ್ಷಗಳಿಗೆ ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸರ್ಕಾರಿ ನೌಕರರು ಭಾಗವಹಿಸಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆಯಾಗಿರುವ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇಲಾಖೆಯ ನೌಕರರ ಕ್ಷೇಮಾಭಿವೃದ್ಧಿ ಮತ್ತು ನೌಕರರು ಹಿತ ಕಾಯುವುದರ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ, ರೈತಾಪಿ ವರ್ಗದ ಜನಗಳಿಗೆ, ನೊಂದ ಮಹಿಳೆಯರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ನೇರವಾಗಿ ತಲುಪಿಸಿ ಅವರೊಂದಿಗೆ ನೇರವಾಗಿ ಒಡನಾಟ ಇರುವಂತಹ ಇಲಾಖೆಯಾಗಿದ್ದು ತಮಗೆ ನೀಡಿರುವ ಕೆಲಸಗಳನ್ನು ಜವಾಬ್ದಾರಿಯುತವಾಗಿ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಲಿ ಎಂದು ಸಲಹೆ ನೀಡುತ್ತಾ ತಮ್ಮ ಮುಂದಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಂಘಟನೆಯ ಅಭಿವೃದ್ಧಿ ಕೆಲಸಗಳು ನಿರಂತರವಾಗಿ, ಯಶಸ್ವಿಯಾಗಿ ನಡೆಯಲಿ ಎಂದು ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…