Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಸ್ಕಾರ ಕಲಿಸುವ ಗುರುವನ್ನು ಜೀವನದಲ್ಲಿ ಮರೆಯಬಾರದು : ಡಿಡಿಪಿಐ ಮಂಜುನಾಥ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ಗುರು-ಶಿಷ್ಯರ ನಡುವಿನ ಅವಿನಾಭಾವ ಸಂಬಂಧ ನಿತ್ಯ ನಿರಂತರವಾಗಿರಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಕರೆ ನೀಡಿದರು.

ಜೋಗಿಮಟ್ಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1980-81 ನೇ ಸಾಲಿನ ಹಿರಿ, ಕಿರಿಯ ವಿದ್ಯಾರ್ಥಿಗಳಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ
ಗುರುವಂದನಾ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ಬಾಲ್ಯದಲ್ಲಿ ಈ ಶಾಲೆಯಲ್ಲಿ ಓದಿದ ಗೆಳೆಯರ ನಡುವಿನ ಅನುಭವ ಜೀವನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಸುಮಾರು ನಲವತ್ತೈದು ವರ್ಷಗಳ ಹಿಂದೆ ಈ ಭಾಗದಲ್ಲಿ ಶಾಲೆಯೇ ಇಲ್ಲದಂತ ಸಮಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನೇಕ ಮಕ್ಕಳಿಗೆ ಶಿಕ್ಷಣ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ನೆರವಾಗಿದೆ. ಮಕ್ಕಳನ್ನು ತಿದ್ದಿ ತೀಡಿ ಸಂಸ್ಕಾರ ಕಲಿಸುವ ಗುರುವನ್ನು ಜೀವನದಲ್ಲಿ ಮರೆಯಬಾರದೆಂದು ಹಳೆಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮನೆಯೆ ಮೊದಲ ಪಾಠಶಾಲೆ. ತಾಯಿಯೆ ಮೊದಲು ಗುರು ಎನ್ನುವ ನಾಣ್ಣುಡಿ ಪ್ರಸಿದ್ದಿಯಲ್ಲಿದೆ. ಶಾಲೆಯಲ್ಲಿ ಗುರುವಿನ ಪಾತ್ರ ಅಮೂಲ್ಯವಾದುದು. ಶಿಕ್ಷಣದ ಜೊತೆ ಸಂಸ್ಕಾರ ಕಲಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ. ಹಾಗಾಗಿ ಗುರುವಿನ ಋಣ ತೀರಿಸುವುದು ಸುಲಭವಲ್ಲ ಎಂದರು.

ಜ್ಞಾನಾರ್ಜನೆ ಅಷ್ಟು ಸುಲಭವಲ್ಲ. ಶಾಲೆಯಲ್ಲಿ ಮಕ್ಕಳಿಗೆ ಜ್ಞಾನ ಸಂಪತ್ತು ಕೊಡುವ ಗುರುವಿನ ಮಹತ್ವ ಅತ್ಯಂತ ಶ್ರೇಷ್ಟವಾದುದು. ಶಾಲೆಯೆಂದರೆ ದೇವಾಲಯವಿದ್ದಂತೆ. ಪಾಠ ಕಲಿತ ಹಳೆಯ ಶಾಲೆಯ ಬಗ್ಗೆ ವಿದ್ಯಾರ್ಥಿಗಳು ಅಭಿಮಾನವಿಟ್ಟುಕೊಂಡು ಗುರುಗಳನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಗುರುಗಳನ್ನು ಅಭಿನಂದಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ ಎಂದು ಗುಣಗಾನ ಮಾಡಿದರು.

ನಗರಸಭೆ ಮಾಜಿ ಸದಸ್ಯ ಗರಡಿ ಪ್ರಕಾಶ್, ನಾಮನಿರ್ದೇಶಿತ ಸದಸ್ಯ ಓಂಕಾರ್, ಶ್ರೀಧರ್, ಶ್ರೀನಿವಾಸ್, ಮಂಜುನಾಥ್, ಮಧುಸೂದನ್, ನಾಗರಾಜ್, ನಾಗೇಶ್, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‍ಕುಮಾರ್ ಇವರುಗಳು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...