ಎಸ್. ಆರ್. ಎಸ್. ಹೆರಿಟೇಜ್ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ

ಚಿತ್ರದುರ್ಗ,(ಜು.13):  ನಗರದ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯಲ್ಲಿಂದು “ಅನಂತಕೃಷ್ಣ ಬೃಹತ್ ಸಭಾಂಗಣದಲ್ಲಿ” ಗುರುಪೂರ್ಣಿಮಾ ಕಾರ್ಯಕ್ರಮವನ್ನು ನಡೆಸಲಾಯಿತು.

ಪ್ರತಿ ವರ್ಷ ಆಷಾಡ ಮಾಸದ ಶುಕ್ಲಪಕ್ಷದ ಹುಣ್ಣಿಮೆಯ ದಿನ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ  ಕಾರ್ಯಕ್ರಮದಲ್ಲಿ ಶಾಲೆಯ 3 ರಿಂದ 6ನೆ ತರಗತಿಯ ಸರಿಸುಮಾರು 650 ಮಕ್ಕಳು ಉತ್ಸಾಹಭರಿತವಾಗಿ ತಮ್ಮ ಪೋಷಕರ ಪಾದಪೂಜೆ ಮಾಡುವ ಮೂಲಕ ಅವರ ಆಶೀರ್ವಾದಕ್ಕೆ ಪಾತ್ರರಾದರು.

ಗುರುಗಳ ಸ್ಥಾನವು ದೇವರಿಗೆ ಸಮಾನ ಎಂದು ಹೇಳಲಾಗುತ್ತದೆ. ಜೀವನದ ನಿಜವಾದ ಮಾರ್ಗತೋರಿಸಲು ಗುರು ಸಹಾಯ ಮಾಡುತ್ತಾರೆ. ಈ ದಿನ ಜನಿಸಿದ ವೇದವ್ಯಾಸರು ವೇದಗಳನ್ನು ರಚಿಸಿದ ಪವಿತ್ರ ದಿನ ಮೂಲಕ ಈ ಮೂಲಕ  ಜಗತ್ತಿಗೆ ಜ್ಞಾನವನ್ನು ಹರಡಿದರು.

ಈ ಕಾರ್ಯಕ್ರಮ ಆಚರಣೆಯ ಮೂಲಕ ಭಾರತೀಯ ಸಂಸೃತಿ, ಸಂಸ್ಕಾರ ಮತ್ತು ಹಿಂದಿನ ಗುರುಕುಲ ಶಿಕ್ಷಣವನ್ನು ಮರುಕಳಿಸುವುದು ಹಾಗೂ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕøತಿ ಮತ್ತು ಮೌಲ್ಯಗಳನ್ನು ಬೆಳಸುವುದಾಗಿದೆ.

ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿದರು. ಹಾಗೂ ಕಾರ್ಯಕ್ರಮದ ಬಗ್ಗೆ ತಮ್ಮ ಭಾವನೆಗಳೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ “ಎಸ್. ಆರ್. ಎಸ್ ಶಿಕ್ಷಣ ಸಮೂಹ ಸಂಸ್ಥೆಯ” ಅಧ್ಯ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿಯವರು,  ಸಂಸ್ಥೆಯ ಉಪಾಧ್ಯಾಕ್ಷರಾದ ಅಮೋಘ್ ಬಿ ಎಲ್ ಆಡಳಿತಾಧಿಕಾರಿಳಾದ ಡಾ|| ರವಿ ಟಿ. ಎಸ್. ಶಾಲೆಯ ಪ್ರಾಂಶುಪಾಲರಾದ ಪ್ರಭಾಕರ್ ಎಂ. ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಾಗೂ ತರಗತಿಯ ಶೈಕಣಿಕ ಸಂಯೋಜಕರಾದ ಶ್ರೀಮತಿ ರೋಹಿನ ಟಿ. ಮತ್ತು ಶ್ರೀಯುತ ಜಗದೀಶ್, ಬೋಧಕ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

54 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago