ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ.ದೇವೇಗೌಡ ಬೆಂಬಲ..!

1 Min Read

 

ದೇಶದಲ್ಲಿ ಸದ್ಯಕ್ಕೆ ವಕ್ಫ್ ಮಸೂದೆಯದ್ದೇ ಸದ್ದು. ಇದೀಗ ವಕ್ಫ್ ತಿದ್ದುಪಡಿ ಮಸೂದೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕೂಡ ಬೆಂಬಲ ನೀಡಿದ್ದಾರೆ. ವಕ್ಫ್ ಮಸೂದೆಯು ಮುಸ್ಲಿಂ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ದೇವೇಗೌಡ ಅವರು ಪ್ರತಿಪಾದಿಸಿದ್ದಾರೆ.

ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು 1.2 ಲಕ್ಷ ಕೋಡಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಂರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ. ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಯನ್ನು ನಿಯಂತ್ರಿಸುತ್ತದೆ. ಅದರ ಮೌಲ್ಯ 1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೇವೇಗೌಡರು ಉಲ್ಲೇಖಿಸಿದ್ದಾರೆ.

 

ನಾವೂ ಜಾತ್ಯಾತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ. ವಜ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ವಿಧೇಯಕವೂ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲ ಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *