Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ಹೆಚ್. ಆಂಜನೇಯಗೆ MLC ಸ್ಥಾನ ನೀಡಿ: ಪಕ್ಷದ ಹೈಕಮಾಂಡ್ಗೆ ಹೆಚ್.ಕೆ. ರವೀಂದ್ರ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 27 : ಶೋಷಿತರ ಗಟ್ಟಿ ಧ್ವನಿ, ಮಾಜಿ ಸಚಿವ ಹೆಚ್ ಆಂಜನೇಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಸಿ.ಎಸ್. ರವೀಂದ್ರ ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಹೆಚ್ ಆಂಜನೇಯ ಅವರು ರಾಜ್ಯದ ಪ್ರಭಾವಿ ನಾಯಕರಾಗಿದ್ದು, ಪಕ್ಷದ ಅಷ್ಟೇ ನಿಷ್ಠಾವಂತರು. ಈ ನಾಡಿನ ದಲಿತರ ಅಗ್ರಗಣ್ಯ ನಾಯಕರಾಗಿರುವ ಆಂಜನೇಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದು,  ರಾಜ್ಯದಲ್ಲಿ ಮಾದಿಗ ಸಮಾಜ ಅತೀ ಹೆಚ್ಚು ಜನಸಂಖ್ಯೆ ಹೊಂದಿದ್ದು,ಈ ಸಮಾಜದ ಮೇಲೆ ಆಂಜನೇಯ ಅವರಿಗೆ ಹಿಡಿತವಿದೆ. ಭವಿಷ್ಯದ ದಿನಗಳಲ್ಲಿ ಪಕ್ಷದ ಬೆಳವಣಿಗೆಯ ದೃಷ್ಠಿಯಿಂದ ಅವರಿಗೆ ಸರ್ಕಾರದಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಆಂಜನೇಯ ಅವರು ಹುಟ್ಟು ಹೋರಾಟಗಾರರು. ಯುವ ಕಾಂಗ್ರೆಸ್ ಹಂತದಿಂದ ಬೆಳೆದು ಬಂದವರು. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಅವರ ಪಾತ್ರವೂ ಇದೆ. ಇಡೀ ರಾಜ್ಯದಲ್ಲಿ ಅವರ ಅನುಯಾಯಿಗಳು ಸಾವಿರಾರು ಸಂಖ್ಯೆಯಲ್ಲಿ ಇದ್ದು, ಸರ್ಕಾರ ಮತ್ತು ಪಕ್ಷ ಅವರಿಗೆ ಉತ್ತಮ ಸ್ಥಾನ ಮಾನ ನೀಡಲಿ ಎಂಬ ಬಯಕೆ ಹೊಂದಿದ್ದಾರೆ, ಸಿದ್ದರಾಮಯ್ಯನವರ ನೇತೃತ್ವದ ಮೊದಲ ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು. ತಮ್ಮ ಅಧಿಕಾರಾವಧಿಯಲ್ಲಿ ದಲಿತರು, ಹಿಂದುಳಿದವರು ಹಾಗೂ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ಅವರು ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದರು ಎಂದು ಹೇಳಿದರು .

ಆಂಜನೇಯವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮತ್ತು ವಿಶೇಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಾಗಿದೆ ಈ ಕಾರಣದಿಂದ ಇವರ ಸೇವೆಯನ್ನು ಬಳಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ವಿಧಾನಪರಿಷತ್ತಿಗೆ ಸದಸ್ಯರಾಗಿ ನಾಮಕರಣ ಮಾಡಿ ಪಕ್ಷದ ಸಂಘಟಎಲ್ಲಿ ತೊಡಗಿಸಿಕೊಳ್ಳಲು ಮತ್ತು ದಲಿತರನ್ನು ಕಾಂಗ್ರೆಸ್ಸಿನ ಕಡೆಗೆ ಎಳೆಯಲು ಎಂಎಲ್ಸಿ ಸ್ಥಾನ ನೀಡಬೇಕು ಎಂದು ಸಿ.ಎಸ್. ರವೀಂದ್ರ ಮನವಿ ಮಾಡಿದರು.

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now