Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ಮಂಡಲ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಎನ್. ಲೋಕೇಶ್ ಕುಮಾರ್ ರಾಜೀನಾಮೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಚಿತ್ರದುರ್ಗ ನಗರ ಮಂಡಲ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷರಾದ ಎಚ್.ಎನ್. ಲೋಕೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಾಂತರಗಳಿಂದ ತಮಗೆ ಈ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ, ಅವರು ತಮ್ಮ ರಾಜೀನಾಮೆ ಪತ್ರವನ್ನು ಜುಲೈ 19 ರಂದು ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರದಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿರುವ ಲೋಕೇಶ್ ಕುಮಾರ್ ಅವರು, ವೈಯಕ್ತಿಕ ಕಾರಣಗಳಿಂದಾಗಿ ನಗರ ಮಂಡಲ ಅಧ್ಯಕ್ಷರ ಹುದ್ದೆಯನ್ನು ಮುಂದುವರಿಸಿಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಈ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದು, ಇದನ್ನು ಅಂಗೀಕರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.

ಹುದ್ದೆಗೆ ರಾಜೀನಾಮೆ ನೀಡಿದ್ದರೂ ಪಕ್ಷದ ಮೇಲಿನ ತಮ್ಮ ನಿಷ್ಠೆ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಸಿದ್ಧಾಂತ, ನಾಯಕತ್ವ ಹಾಗೂ ಸಂಘಟನೆಯ ಮೇಲಿನ ನನ್ನ ಬದ್ಧತೆ ಮತ್ತು ನಿಷ್ಠೆ ಎಂದಿನಂತೆಯೇ ಮುಂದುವರಿಯುತ್ತದೆ. ಮುಂದಿನ ದಿನಗಳಲ್ಲಿಯೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಸಂಪೂರ್ಣ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, ತಮಗೆ ಈವರೆಗೆ ಜವಾಬ್ದಾರಿ ನೀಡಿ ಮಾರ್ಗದರ್ಶನ ಹಾಗೂ ಸಹಕಾರ ನೀಡಿದ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದ ಎಲ್ಲಾ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now