ಸುದ್ದಿಒನ್, ಚಿತ್ರದುರ್ಗ, ನವೆಂಬರ್. 28 : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನೀಡಲಾಗುವ ರಾಜ್ಯ ಮಟ್ಟದ ಪ್ರತಿಷ್ಠಿತ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಚಿತ್ರದುರ್ಗದ ಹೆಚ್.ಪ್ಯಾರೇಜಾನ್ ಆಯ್ಕೆಯಾಗಿದ್ದಾರೆ.
ಕೊಳಗೇರಿ ನಿವಾಸಿಗಳ ಹಕ್ಕಿಗಾಗಿ ಸಾಕಷ್ಟು ಹೋರಾಟ ಸೇರಿದಂತೆ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೆಚ್.ಪ್ಯಾರೇಜಾನ್‍ರವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ನ.30 ರಂದು ಮೈಸೂರಿನಲ್ಲಿ ನಡೆಯುವ ಕನ್ನಡ ಹಬ್ಬದಲ್ಲಿ ಕನ್ನಡ ವಿಕಾಸ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ
ಯಮುನಾ ಹೆಚ್.ಎಲ್.ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











