ಚಿತ್ರದುರ್ಗ. ನ.07: ಚಿತ್ರದುರ್ಗ ಜಿಲ್ಲಾ ಖಜಾನೆ ಉಪನಿರ್ದೇಶಕರಾಗಿ ಹೆಚ್.ಟಿ.ಅಶೋಕ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಖಜಾನೆ ಉಪನಿರ್ದೇಶಕರ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದ ಸಹಾಯಕ ನಿರ್ದೇಶಕ ಎನ್.ಬೋರಯ್ಯ ಅವರು ಹೆಚ್.ಟಿ.ಅಶೋಕ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಖಜಾನೆಯ ಇಲಾಖೆಯ ಮುಖ್ಯಲೆಕ್ಕಿಗರಾದ ಅಶೋಕ್ ತುಂಬಿನಕಟ್ಟಿ, ಗಂಗಾಧರ್, ಪ್ರಭುಕುಮಾರ್, ನರಸಿಂಹಮೂರ್ತಿ, ಪ್ರಥಮ ದರ್ಜೆ ಸಹಾಯಕ ಅಶೋಕ್ ಸೇರಿದಂತೆ ಸಿಬ್ಬಂದಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








