ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಿರಂತರವಾಗಿ ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚಿಸಿಕೊಳ್ಳಬಹುದೆಂದು ಕೃಷ್ಣರಾಜೇಂದ್ರ ಗ್ರಂಥಾಲಯಾಧಿಕಾರಿ ಬಸವರಾಜ್‍ಕೊಳ್ಳಿ ತಿಳಿಸಿದರು.

ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದಿಂದ ತಾಂತ್ರಿಕ ಪದವಿಯ ಅನೇಕ ಪುಸ್ತಕಗಳನ್ನು ಸ್ವೀಕರಿಸಿ ನಂತರ ಮಾತನಾಡಿದ ಅವರು ಸರ್ಕಾರಿ ನೌಕರಿ ಸಿಕ್ಕ ಕೂಡಲೆ ಓದುವುದನ್ನೆ ನಿಲ್ಲಿಸಿಬಿಡುವುದು ಸರಿಯಲ್ಲ. ಪುಸ್ತಕ ಓದುವುದಕ್ಕೆ ವಯಸ್ಸಿನ ಮಿತಿಯಿಲ್ಲ. ಎಲ್ಲಾ ವಯೋಮಾನದವರು ಪುಸ್ತಕಗಳನ್ನು ಓದುವುದರಿಂದ ಸಾಕಷ್ಟು ವಿಚಾರಗಳು ದೊರಕುತ್ತವೆ. ಗ್ರಂಥಾಲಯಗಳಲ್ಲಿ ಅನೇಕ ಮಹತ್ವದ ಪುಸ್ತಕಗಳಿರುವುದು ಬಡ ಮಕ್ಕಳ ಓದಿಗೆ ನೆರವಾಗುತ್ತಿದೆ ಎಂದು ಹೇಳಿದರು.
1925 ರಲ್ಲಿ ಆರಂಭಗೊಂಡ ಕೃಷ್ಣರಾಜೇಂದ್ರ ಗ್ರಂಥಾಲಯಕ್ಕೆ ಶತಮಾನದ ಇತಿಹಾಸವಿರುವುದರಿಂದ ವಿಜೃಂಭಣೆಯಿಂದ ಶತಮಾನೋತ್ಸವ ಆಚರಿಸಲಾಗುವುದು. ಚಿತ್ರದುರ್ಗ, ತುಮಕೂರು, ಬಳ್ಳಾರಿಗೆ ಗಣಿ ಹಣ ಬಂದಿದೆ. ಅದರಲ್ಲಿ ಚಿತ್ರದುರ್ಗದ ಗ್ರಂಥಾಲಯಕ್ಕೆ ಹತ್ತು ಕೋಟಿ 29 ಲಕ್ಷ ರೂ. ಮಂಜೂರಾಗಿದೆ. ಚಿತ್ರದುರ್ಗ ನಗರವೊಂದರಲ್ಲಿಯೇ ಆರು ಕೋಟಿ ರೂ.ಗಳನ್ನು ಖರ್ಚು ಮಾಡಿ ಬಯಲು ಗ್ರಂಥಾಲಯ, ಹೈಟೆಕ್ ಶೌಚಾಲಯಗಳನ್ನು ನಿರ್ಮಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಗ್ರಂಥಾಲಯಕ್ಕೆ ಗಣಿ ಹಣವನ್ನು ಬಳಸಲಾಗುವುದು ಎಂದರು.
ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ಮಾತನಾಡಿ ಎಂ.ಎಸ್.ಗಿರೀಶ್‍ರವರ ಪುತ್ರ ಓದಿ ತಾಂತ್ರಿಕ ಪದವಿ ಪಡೆದ ಪುಸ್ತಕವನ್ನು ಗ್ರಂಥಾಲಯಕ್ಕೆ ನೀಡಲಾಗಿದೆ. ಮುಂದಿನ ಮೂವತ್ತು ದಿನಗಳಲ್ಲಿ ನಮ್ಮ ಸಂಘದಿಂದ ಒಂದು ಸಾವಿರ ಪುಸ್ತಕಗಳನ್ನು ನೀಡಲಾಗುವುದು. ಇದರಿಂದ ಬಡ ಮಕ್ಕಳ ಓದಿಗೆ ಅನುಕೂಲವಾಗಲಿ ಎಂದು ಹೇಳಿದರು.
ಆರ್ಯವೈಶ್ಯ ಅಧಿಕಾರಿಗಳು ಮತ್ತು ವೃತ್ತಿನಿರತರ ಸಂಘದ ಕಾರ್ಯದರ್ಶಿ ಡಿ.ಆರ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಪಿ.ಎನ್.ಮೋಹನ್‍ಕುಮಾರ್‍ಗುಪ್ತ, ಪುಸ್ತಕ ದಾನಿ
ಎಂ.ಎಸ್.ಗಿರೀಶ್, ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಅಬುಸಾಲೇಹ ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್