ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಟಿಪ್ಪಣಿ ರವಾನಿಸಲಾಗಿದ್ದು, ಶಾಸಕ ಶ್ರೀನಿವಾಸ ಮಾನೆ ಅವರ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.










