ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 01 : ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಹೋಬಳಿ ಹನುಮಲಿ ಗ್ರಾಮದ ಶತಾಯುಷಿ ಚಂದ್ರಮ್ಮ(102) ಸೋಮವಾರ ರಾತ್ರಿ 10-45 ಕ್ಕೆ ಬೆಂಗಳೂರಿನಲ್ಲಿ ನಿಧನರಾದರು.

ಮೃತರು ಹನುಮಲಿ ಷಣ್ಮುಖಪ್ಪ ಸೇರಿದಂತೆ ನಾಲ್ವರು ಪುತ್ರರು ಹಾಗೂ ಐವರು ಪುತ್ರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹನುಮಲಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


