ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಆಗಸ್ಟ್.13: 78ನೇ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ನಗರಸಭೆ ವತಿಯಿಂದ “ಹರ್ ಘರ್ ತಿರಂಗಾ” ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಹರ್ ಘರ್ ತಿರಂಗಾ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ರಾಷ್ಟ್ರಧ್ವಜದೊಂದಿಗೆ ಬೈಕ್ ರ್ಯಾಲಿಗೆ ಚಾಲನೆ ದೊರೆಯಿತು.
ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆ ಪ್ರೇರೇಪಿಸುವುದು, ಐಕ್ಯತೆ, ಭಾವೈಕ್ಯತೆ ಮತ್ತು ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ ಕಾರ್ಯಕ್ರಮ ಅಯೋಜಿಸಿದ್ದು, ಪ್ರತಿಯೊಬ್ಬರಲ್ಲಿಯೂ ಭಾರತ ಸ್ವಾತಂತ್ರ್ಯದ ಹಣತೆಯ ದೀಪ ಹಚ್ಚುವಂತಹ ಕಾರ್ಯ ಆಗಬೇಕಿದೆ ಎಂದು ಹೇಳಿದರು.
ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಭಾರತ ಸ್ವಾತಂತ್ರೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ, ದೇಶಭಕ್ತಿ ಗೀತೆಗಳ ಗಾಯನ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದರು.
ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ, ಅಂಚೆ ಕಚೇರಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಲಭ್ಯವಿದ್ದು, ಪ್ರತಿ ಧ್ವಜಕ್ಕೆ ರೂ.26 ದರ ನಿಗದಿಪಡಿಸಲಾಗಿದೆ ಎಂದು ತಿಳಿಸಿದ ಅವರು, ಹರ್ ಘರ್ ತಿರಂಗಾ ಅಭಿಯಾನದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಿಂದ ಆರಂಭವಾದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಯು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಎಸ್ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ಚಳ್ಳಕೆರೆ ಗೇಟ್ ತಲುಪಿ ನಂತರ ಪುನಃ ನಗರಸಭೆಗೆ ಆಗಮಿಸಿ ರ್ಯಾಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ನಗರಸಭೆ ಸದಸ್ಯರಾದ ಸುರೇಶ್, ಶಶಿಧರ್, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ನೌಕರರ ಸಂಘದ ಅಧ್ಯಕ್ಷೆ ರೇಣುಕಾ, ಗುತ್ತಿಗೆದಾರ ಸಂಘದ ಅಧ್ಯಕ್ಷ ಸಿದ್ದಪ್ಪ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಪಟುಗಳು, ಸಾರ್ವಜನಿಕರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್