Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ ಘರ್ ತಿರಂಗಾ: ಎಲ್ಲಾ ಕಡೆ ಸಾರ್ವಜನಿಕರಿಗೆ ಧ್ವಜ ಲಭ್ಯ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

Facebook
Twitter
Telegram
WhatsApp

ಚಿತ್ರದುರ್ಗ,(ಆ.11) : ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಇದೇ ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿದೆ. ಈ ವೇಳೆ ಜಿಲ್ಲೆಯ ಎಲ್ಲ ಸಾರ್ವಜನಿಕರು ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಅಮೃತ ಮಹೋತ್ಸವದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಎಲ್ಲಾ ಮನೆಗಳು, ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ-ಸಂಸ್ಥೆಗಳು, ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು, ವಸತಿ ಸಮುಚ್ಚಯಗಳ ಕಟ್ಟಡಗಳ ಮೇಲೆ ಧ್ವಜವನ್ನು ಹಾರಿಸಬೇಕು ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿದ್ಯಮಯವಾಗಿ ಆಚರಿಸಲಾಗುತ್ತಿದೆ. ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಪ್ರತಿ ಮನೆ-ಮನೆಯಲ್ಲಿಯೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಬಿಂಬಿಸುವ ಮೂಲಕ ನಮ್ಮ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಕರೆ ನೀಡಿದ್ದಾರೆ.

ಧ್ವಜಗಳು ಎಲ್ಲೆಲ್ಲಿ ಲಭ್ಯ: ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಕಚೇರಿಗಳಲ್ಲಿ ಹಾಗೂ ವಾರ್ಡ್‍ವಾರು ಸಂಬಂಧಿಸಿದ ವಾಟರ್ ಮ್ಯಾನ್, ಆರೋಗ್ಯ ನಿರೀಕ್ಷಕರು, ಕಂದಾಯ ನಿರೀಕ್ಷಕರಿಗೆ ಧ್ವಜ ವಿತರಣೆಗೆ ಸೂಚನೆ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಶಾಲೆಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಮೂಲಕ ಕಾಲೇಜುಗಳಿಗೂ ವಿತರಿಸಲಾಗಿದೆ.

ಆರೋಗ್ಯ ಇಲಾಖೆ ಮೂಲಕ ಆರೋಗ್ಯ ಸಿಬ್ಬಂದಿಗೆ ಹಾಗೂ ಆಶಾ ಕಾರ್ಯಕರ್ತರಿಗೂ ಧ್ವಜ ವಿತರಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲ 353 ಅಂಚೆ ಕಚೇರಿಗಳಲ್ಲಿಯೂ ಧ್ವಜ ಲಭ್ಯವಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳಾದ ಕೆನರಾ ಬ್ಯಾಂಕ್ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್‍ನ ಎಲ್ಲಾ ಶಾಖೆಗಳಲ್ಲಿಯೂ ರಾಷ್ಟ್ರ ಧ್ವಜ ಖರೀದಿಗೆ ಲಭ್ಯವಿದೆ.

ಸರ್ಕಾರದಿಂದ ಹಂಚಿಕೆಯಾಗಿರುವ ಧ್ವಜ ಒಂದಕ್ಕೆ ರೂ.22 ನಿಗದಿಪಡಿಸಲಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಧ್ವಜಗಳು ಖರೀದಿಗೆ ಲಭ್ಯವಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಎಲ್ಲ ಸಾರ್ವಜನಿಕರು ಅವರವರ ಮನೆಗಳಲ್ಲಿ ಧ್ವಜ ಹಾರಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರವು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮೂಲಕ 1.25 ಲಕ್ಷ ರಾಷ್ಟ್ರಧ್ವಜ ಪೂರೈಕೆ ಮಾಡಲಾಗಿದ್ದು, ಧ್ವಜ ಒಂದಕ್ಕೆ ರೂ.22ರಂತೆ ದರ ವಿಧಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಜೊತೆಗೆ ಸ್ಥಳೀಯ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಇತರೆ ತಯಾರಕರಿಂದ ಜಿಲ್ಲಾ ಪಂಚಾಯಿತಿಯಿಂದಲೂ 1 ಲಕ್ಷ ಧ್ವಜಗಳನ್ನು ಖರೀದಿಸಿ, ಮಾರಾಟ ಮಾಡುತ್ತಿದೆ. ಮತ್ತು ಸ್ಥಳೀಯ ಸಂಸ್ಥೆಗಳಿಂದಲೂ 30 ಸಾವಿರ ಧ್ವಜಗಳನ್ನು ಖರೀದಿ ಮಾಡಿ ನೀಡಲಾಗುತ್ತಿದೆ.

ಧ್ವಜ ಸಂಹಿತೆ ಅನ್ವಯ ಸರ್ಕಾರಿ, ಅರೆ ಸರ್ಕಾರಿ, ಶಾಲಾ-ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರಧ್ವಜವನ್ನು ಸೂರ್ಯ ಉದಯದಿಂದ ಸೂರ್ಯಸ್ತದವರೆಗೆ ಮಾತ್ರ ಹಾರಿಸಬೇಕು. ಆದರೆ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹಗಲು-ರಾತ್ರಿ ದಿನದ 24 ಗಂಟೆಯೂ ರಾಷ್ಟ್ರಧ್ವಜ ಹಾರಿಸಬಹುದು. ಎಲ್ಲರೂ ರಾಷ್ಟ್ರ ಧ್ವಜ ಹಾರಿಸಿ ದೇಶ ಪ್ರೇಮ ಮೆರೆಯಿರಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!