Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಿ20 ವಿಶ್ವಕಪ್ ನಿಂದ ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್ ಔಟ್..!

---Advertisement---

ಟಿ20 ವಿಶ್ವಕಪ್ ಸಂಬಂಧ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಸದ್ಯ ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದು, ಇದು ಮುಗಿದ ಬಳಿಕ ಟಿ20 ವಿಶ್ವಕಪ್ ನಡೆಯಲಿದೆ. ವಿಶ್ವಕಪ್ ಟೂರ್ನಿಮೆಂಟ್ ಗೆ ಈಗಾಗಲೇ ಆಟಗಾರರನ್ನು ಆಯ್ಕೆ ಮಾಡಲಾಗುತ್ತಿದೆ. ಇದರ ನಡುವೆ ಹಾರ್ದಿಕ್ ಪಾಂಡ್ಯ ಹಾಗೂ ಶುಭ್ಮನ್ ಗಿಲ್ ಹೊರ ಬಿದ್ದಿರುವ ವಿಚಾರ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಶಾಕಿಂಗ್ ಎನಿಸಿದೆ.

ಈ ಟೂರ್ನಿಗೆ ಸೂಕ್ತ ಆಟಗಾರರನ್ನು ಗುರುತಿಸಲು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಸಾಕಷ್ಟು ಹೋಂ ವರ್ಕ್ ನಡೆಸುತ್ತಿದೆ. ಈಗಾಗಲೇ ಹಲವು ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶ‌ನ ನೀಡುತ್ತಿರುವವರಿಗೆ ವಿಶ್ವಕಪ್ ನಲ್ಲಿ ಸ್ಥಾನ ನೀಡಿ ಎಂದು ದಿಗ್ಗ ಕ್ರಿಕೆಟರ್ ಯುವರಾಜ್ ಸಿಂಗ್ ಭಾರತೀಯ ಸಮಿತಿಗೆ ಸಲಹೆ ನೀಡಿದ್ದಾರೆ. ಹೀಗಾಗಿಯೇ ಐಪಿಎಲ್ ಮ್ಯಾಚ್ ಅನ್ನು ಬಹಳ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ವೇಳೆ ಯುವರಾಜ್ ಸಿಂಗ್ ಮತ್ತಷ್ಟು ಸಲಹೆಗಳನ್ನು ನೀಡಿದ್ದು, ರಿಂಕು ಸಿಂಗ್ ಕೂಡ ಭಾರತ ತಂಡದ ಭಾಗವಾಗಲಿ. ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡುವಾಗ ಯೋಚಿಸಿ ಎಂದಿದ್ದಾರೆ. ಹೀಗಾಗಿ ಆ ಇಬ್ಬರಿಗೆ ಟಿ20 ವಿಶ್ವಕಪ್ ನಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರಾ ಕಡಿಮೆ ಇದೆ ಎನ್ನಲಾಗಿದೆ. ಇದು ಅಭಿಮಾನಿಗಳಿಗೆ ಶಾಕಿಂಗ್ ಕೂಡ ಎನಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment